ನವದೆಹಲಿ: ಭಾರತದ ಸ್ವಾತಂತ್ರ್ಯದ 75 ನೇ ವರ್ಷದ ಸ್ಮರಣಾರ್ಥವಾಗಿ ಆಯೋಜಿಸಲಾದ “ರೈತರು-ವಿಜ್ಞಾನಿಗಳ ಸಂಪರ್ಕ ಸಭೆ” ಎಂಬ ಮೆಗಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು 75 ಮಹತ್ವಾಕಾಂಕ್ಷೆಯ ಜಿಲ್ಲೆಗಳ 75,000 ರೈತರನ್ನು ಉದ್ದೇಶಿಸಿ ಮಾತನಾಡಿದರು.
ಉತ್ತಮ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಮತ್ತು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನಗಳ ದಿಗ್ಗಜ ವಿಜ್ಞಾನಿಗಳೊಂದಿಗೆ ರೈತರು ಮುಕ್ತವಾಗಿ ಸಂವಾದ ನಡೆಸಿದ ದೇಶದ ಮೊದಲ ಕಾರ್ಯಕ್ರಮ ಇದಾಗಿದೆ. ಇದನ್ನು “ಆಜಾದಿ ಕಾ ಅಮೃತ್ ಮಹೋತ್ಸವ” ಆಚರಣೆಯ ಅಡಿಯಲ್ಲಿ ನವದೆಹಲಿಯಲ್ಲಿ ಜಂಟಿಯಾಗಿ ಆಯೋಜಿಸಲಾಗಿತ್ತು.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ವಿಜ್ಞಾನ ಆಧಾರಿತ ಕೃಷಿ ಆವಿಷ್ಕಾರಗಳನ್ನು ಕಂಡುಕೊಳ್ಳುವ ವಿಶಿಷ್ಟ ಉಪಕ್ರಮವು ರೈತರ ಆದಾಯವನ್ನು ದ್ವಿಗುಣಗೊಳಿಸುವುದಲ್ಲದೆ ಭಾರತವನ್ನು ವಿಶ್ವದ ಅಗ್ರಗಣ್ಯ ಕೃಷಿ ಮತ್ತು ವೈಜ್ಞಾನಿಕ ಶಕ್ತಿಯನ್ನಾಗಿ ಮಾಡುತ್ತದೆ ಎಂದು ಡಾ. ಸಿಂಗ್ ರೈತರಿಗೆ ಭರವಸೆ ನೀಡಿದರು.
Addressed 75,000 farmers from 75 Aspirational Districts to commemorate 75th year of India’s Independence and connected them with scientific experts to adopt best Technological practices in Agriculture. #AzadiKaAmrutMahotsav pic.twitter.com/cWYMbUt7Sg
— Dr Jitendra Singh (@DrJitendraSingh) October 28, 2021
ಪಿಎಂ ಕಿಸಾನ್ ಮಾನ್ಧನ್ ಯೋಜನೆ, ಪಿಎಂ ಫಸಲ್ ಬಿಮಾ ಯೋಜನೆ, ಪಿಎಂ ಕಿಸಾನ್ ಸಮ್ಮಾನ್, ಮಣ್ಣಿನ ಆರೋಗ್ಯ ಕಾರ್ಡ್, ಬೇವು ಲೇಪಿತ ಯೂರಿಯಾ ಮತ್ತು ಇ-ನಾಮ್ನಂತಹ ಕಲ್ಯಾಣ ಯೋಜನೆಗಳು ನಿಜವಾಗಿಯೂ ಕೃಷಿ ಮತ್ತು ಕೃಷಿ ಉತ್ಪಾದನೆಯಲ್ಲಿ ಕ್ರಾಂತಿಯನ್ನುಂಟು ಮಾಡಿದೆ ಎಂದು ಅವರು ಹೇಳಿದರು.
ರೈತರ ಪರವಾದ ಯೋಜನೆಗಳು ಮತ್ತು ಕಾರ್ಯಕ್ರಮಗಳು ಕೃಷಿ ಕ್ಷೇತ್ರವನ್ನು ಆರ್ಥಿಕವಾಗಿ ಮತ್ತು ಸಂಪನ್ಮೂಲವಾಗಿ ಸಬಲಗೊಳಿಸಿವೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.