ಬೆಂಗಳೂರು : ರಾಜ್ಯದ ಜೈಲಿನಲ್ಲಿರುವ ಖೈದಿಗಳಿಗೆ ಶಿಕ್ಷಣ ನೀಡುವ ಸಲುವಾಗಿ ನವೆಂಬರ್ 1 ರಿಂದ ಸಾಕ್ಷರತಾ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ಇರುವ ಜೈಲುಗಳಲ್ಲಿ ಪ್ರಾರಂಭಿಸಲಿದ್ದೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ರಾಜ್ಯದಾದ್ಯಂತ ಇರುವ ಜೈಲುಗಳಲ್ಲಿ ಸುಮಾರು 16,000 ಕ್ಕೂ ಹೆಚ್ಚು ಖೈದಿಗಳಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ ಸುಮಾರು 6,000 ಖೈದಿಗಳು ಅನಕ್ಷರಸ್ಥರೆಂದು ತಿಳಿದುಬಂದಿದೆ. ಇವರಿಗೆ ಶಿಕ್ಷಣ ನೀಡಲು ಈಗಾಗಲೇ ಪೊಲೀಸ್ ಇಲಾಖೆ ಕ್ರಮಕೈಗೊಂಡಿದೆ. ಶಿಕ್ಷಣ ನೀಡಲು ಅಕ್ಷರಸ್ಥ ಖೈದಿಗಳನ್ನೂ ಬಳಸಿಕೊಂಡು ಅವರಿಗೆ ಗೌರವ ಧನ ನೀಡಲಾಗುವುದು ಎಂದು ಹೇಳಿದ್ದಾರೆ.
ಖೈದಿಗಳು ಜೈಲಿನಲ್ಲಿರುವವರಗೆ ಅವರಿಗೆ ಶಿಕ್ಷಣವನ್ನು ನೀಡಲಾಗುವುದು. ಕಲಿಕೆ ಬಗ್ಗೆ ಅವರಿಗೆ ಆಸಕ್ತಿ ತುಂಬಿ ಅವರನ್ನು ಅಕ್ಷರಸ್ಥರನ್ನಾಗಿಸುವುದು ಇದರ ಉದ್ದೇಶ ಎಂದು ಹೇಳಿದ್ದಾರೆ.
ನವೆಂಬರ್ 1 ರಿಂದ ಕವಾಯತು ಕಾಶನ್ ಅನ್ನು ಕನ್ನಡದಲ್ಲಿ ಪ್ರಾರಂಭಿಸಲಾಗುವುದು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.