ನವದೆಹಲಿ: ಆಂಧ್ರಪ್ರದೇಶದ ಕೆಲವು ಜಿಲ್ಲೆಗಳಿಂದ ಇತ್ತೀಚೆಗೆ 17ಕ್ಕೂ ಹೆಚ್ಚು ಭಾರತೀಯ ಯುವಕರು ಕಣ್ಮರೆಯಾಗಿರುವ ಬಗ್ಗೆ ವರದಿಯಾಗಿದ್ದು, ಇವರು ಇಸಿಸ್ ಉಗ್ರ ಸಂಘಟನೆ ಅಥವಾ ಇನ್ನಿತರ ಸಂಘಟನೆಗಳಿಗೆ ಸೇರಿದ್ದಾರೆಯೇ ಎಂಬ ಸಂಶಯ ಮೂಡಿದೆ.
ಭಾರತದ ಮತ್ತು ವಿದೇಶಿ ಗುಪ್ತಚರ ಸಂಸ್ಥೆಗಳ ಮಾಹಿತಿ ಪ್ರಕಾರ ಕಣ್ಮರೆಯಾದ ಈ 17 ಮಂದಿ ಇಸಿಸ್ ಅಥವಾ ಅದರ ಪ್ರತಿಸ್ಪರ್ಧಿ ಸಂಘಟನೆಯಾದ ಜಬಾತ್-ಅಲ್-ನುಸ್ರಾಗೆ ಸೇರ್ಪಡೆಗೊಂಡಿರುವ ಬಗ್ಗೆ ಶಂಕಿಸಲಾಗಿದೆ. ಈ ಮಧ್ಯೆ ಉಗ್ರ ಸಂಘಟನೆಗಳಿಗೆ ಸೇರಲು ಹೊರಟಿದ್ದ 22 ಮಂದಿಯನ್ನು ಪೊಲೀಸರು ತಡೆದಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾರ್ಯ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.