ನವದೆಹಲಿ: ಕನ್ನಡಿಗ ರಾಹುಲ್ ದ್ರಾವಿಡ್ ಅವರು ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕವಾಗಿದ್ದಾರೆ. ರವಿ ಶಾಸ್ತ್ರಿ ಅವರ ಸ್ಥಾನವನ್ನು ಅವರು ತುಂಬಲಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ದ್ರಾವಿಡ್, ಭಾರತ ತಂಡಕ್ಕೆ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುವುದು ದೊಡ್ಡ ಗೌರವದ ವಿಷಯವಾಗಿದೆ. ಉತ್ತಮ ಕೆಲಸ ಮಾಡುವತ್ತ ಗಮನ ಹರಿಸುತ್ತೇನೆ ಎಂದಿದ್ದಾರೆ.
ರವಿ ಶಾಸ್ತ್ರಿ ಅವರ ಮಾರ್ಗದರ್ಶನದಲ್ಲಿ ಭಾರತ ತಂಡವು ಹಲವು ಮಹತ್ವದ ಸಾಧನೆಗಳನ್ನು ಮಾಡಿದೆ. ಈ ಸಾಧನೆಗಳನ್ನು ಮುಂದುವರೆಸುವ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.
ಕ್ರಿಕೆಟ್ ಸಲಹಾ ಸಮಿತಿಯು ರಾಹುಲ್ ದ್ರಾವಿಡ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ರಾಹುಲ್ ದ್ರಾವಿಡ್ ಭಾರತದ ಪರ 164 ಟೆಸ್ಟ್, 344 ಅಂತರಾಷ್ಟ್ರೀಯ ಏಕದಿನ ಮತ್ತು 298 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಅವರು ಅಂಡರ್ 19 ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.