ನವದೆಹಲಿ: ಇಂಧನ ಬೆಲೆ ಏರಿಕೆಯ ಪರಿಣಾಮದಿಂದ ತತ್ತರಿಸಿರುವ ಜನಸಾಮಾನ್ಯರಿಗೆ ದೀಪಾವಳಿ ಉಡುಗೊರೆಯಾಗಿ ಬಿಜೆಪಿ ಆಡಳಿತವಿರುವ ಒಂಬತ್ತು ರಾಜ್ಯಗಳು ಇಂಧನ ಬೆಲೆಯನ್ನು ಕಡಿಮೆ ಮಾಡಿವೆ. ಅಸ್ಸಾಂ, ತ್ರಿಪುರಾ, ಮಣಿಪುರ, ಕರ್ನಾಟಕ, ಗೋವಾ, ಉತ್ತರ ಪ್ರದೇಶ, ಗುಜರಾತ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚುವರಿ ಕಡಿತವನ್ನು ಘೋಷಿಸಿವೆ.
ಕೇಂದ್ರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ದೀಪಾವಳಿಯ ಮುನ್ನಾದಿನದಂದು ರೂ 5 ಮತ್ತು ರೂ 10 ರಷ್ಟು ಕಡಿಮೆ ಮಾಡಿದ ನಂತರ ಈ ರಾಜ್ಯಗಳು ಕೂಡ ದರ ಕಡಿತದ ನಿರ್ಧಾರದ ಕಡಿಮೆಗೊಳಿಸಿದೆ. ಗುರುವಾರದಿಂದ ಬೆಲೆ ಕಡಿತ ಜಾರಿಗೆ ಬರಲಿದೆ.
ಅಸ್ಸಾಂ, ತ್ರಿಪುರಾ, ಮಣಿಪುರ, ಕರ್ನಾಟಕ ಮತ್ತು ಗೋವಾ ಕೇಂದ್ರದ ನಿರ್ಧಾರದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಎರಡರ ಬೆಲೆಯನ್ನು ಲೀಟರ್ಗೆ ರೂ 7 ರಷ್ಟು ಕಡಿಮೆ ಮಾಡಿದೆ. ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಅನ್ನು ರಾಜ್ಯದಲ್ಲಿ ಲೀಟರ್ಗೆ ರೂ 2 ಕಡಿಮೆ ಮಾಡಲಾಗುವುದು ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಬುಧವಾರ ಹೇಳಿದ್ದಾರೆ. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ತಮ್ಮ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದ್ದಾರೆ.
“ಪ್ರಧಾನಮಂತ್ರಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದ ನಿರ್ಧಾರವನ್ನು ಅನುಸರಿಸಿ ತ್ರಿಪುರಾ ಸರ್ಕಾರವು ನಾಳೆಯಿಂದ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ರೂ 7 ಕಡಿಮೆ ಮಾಡಲು ನಿರ್ಧರಿಸಿದೆ” ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.