ನವದೆಹಲಿ: ಇಂದು ಮಣಿಪುರದ ಚುರಾಚಂದ್ಪುರ ಜಿಲ್ಲೆಯ ಸಿಂಘಾತ್ ಉಪವಿಭಾಗದಲ್ಲಿ ಉಗ್ರರು ನಡೆಸಿದ ದಾಳಿಗೆ ಅಸ್ಸಾಂ ರೈಫಲ್ಸ್ ಘಟಕದ ಕಮಾಂಡಿಂಗ್ ಆಫೀಸರ್ ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ. ಕಮಾಂಡಿಂಗ್ ಆಫೀಸರ್ ಕರ್ನಲ್ ವಿಪ್ಲವ್ ತ್ರಿಪಾಠಿ ಅವರ ಪತ್ನಿ, ಅಪ್ರಾಪ್ತ ಮಗ ಮತ್ತು ಇತರ ನಾಲ್ವರು ಸಿಬ್ಬಂದಿ ಕೂಡ ಪ್ರಾಣ ಕಳೆದುಕೊಂಡಿದ್ದಾರೆ.
ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದಾಳಿ ನಡೆಸಲಾಗಿದೆ. ಹತ್ಯೆಗೀಡಾದ ಕರ್ನಲ್ ಅವರು ಜಿಲ್ಲೆಯ ಅಸ್ಸಾಂ ರೈಫಲ್ಸ್ ಘಟಕದ ಕಮಾಂಡಿಂಗ್ ಅಧಿಕಾರಿಯಾಗಿ ಡೆಪ್ಯುಟೇಶನ್ ಮೇಲೆ ಸೇವೆ ಸಲ್ಲಿಸುತ್ತಿದ್ದರು.
ಸೇನಾ ಅಧಿಕಾರಿ ರಜೆಯ ನಂತರ ಘಟಕಕ್ಕೆ ಹಿಂತಿರುಗುತ್ತಿದ್ದ ವೇಳೆ ಈ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಇದುವರೆಗೂ ಯಾವುದೇ ಉಗ್ರಗಾಮಿ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಉಗ್ರರ ಪತ್ತೆಗಾಗಿ ಪೊಲೀಸರು ಮತ್ತು ಭದ್ರತಾ ಪಡೆಗಳು ಭಾರೀ ಕಾರ್ಯಾಚರಣೆ ಆರಂಭಿಸಿವೆ. ಮೂಲಗಳ ಪ್ರಕಾರ, ಮಣಿಪುರದಲ್ಲಿ 40ಕ್ಕೂ ಹೆಚ್ಚು ದಂಗೆಕೋರ ಗುಂಪುಗಳಿದ್ದು, ಅವುಗಳಲ್ಲಿ ಒಂದು ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ.
ಘಟನೆಯನ್ನು ಪ್ರಧಾನಿ ಮೋದಿ ತೀವ್ರವಾಗಿ ಖಂಡಿಸಿದ್ದು, ಹುತಾತ್ಮರಾದವರಿಗೆ ಸಂತಾಪ ಸೂಚಿಸಿದ್ದಾರೆ.
“ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲೆ ನಡೆದ ದಾಳಿಯನ್ನು ಕಟುವಾಗಿ ಖಂಡಿಸುತ್ತೇನೆ. ಇಂದು ಹುತಾತ್ಮರಾದ ಯೋಧರು ಮತ್ತು ಕುಟುಂಬದ ಸದಸ್ಯರಿಗೆ ನನ್ನ ಶ್ರದ್ಧಾಂಜಲಿ. ಅವರ ತ್ಯಾಗವನ್ನು ಮರೆಯಲು ಅಸಾಧ್ಯ. ಈ ದುಃಖದ ಸಮಯದಲ್ಲಿ ಅವರ ಕುಟುಂಬಗಳಿಗೆ ನನ್ನ ಸಂತಾಪ” ಎಂದಿದ್ದಾರೆ.
Strongly condemn the attack on the Assam Rifles convoy in Manipur. I pay homage to those soldiers and family members who have been martyred today. Their sacrifice will never be forgotten. My thoughts are with the bereaved families in this hour of sadness.
— Narendra Modi (@narendramodi) November 13, 2021
The cowardly attack on an Assam Rifles convoy in Churachandpur, Manipur is extremely painful & condemnable. The nation has lost 5 brave soldiers including CO 46 AR and two family members.
My condolences to the bereaved families. The perpetrators will be brought to justice soon.
— Rajnath Singh (@rajnathsingh) November 13, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.