ಹೈದರಾಬಾದ್: ದಕ್ಷಿಣದ ರಾಜ್ಯಗಳ ಪ್ರಾಚೀನ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಭಾಷೆಗಳನ್ನು ಹಾಡಿ ಹೊಗಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ದಕ್ಷಿಣ ಭಾರತದ ರಾಜ್ಯಗಳ ಪ್ರಮುಖ ಕೊಡುಗೆ ಇಲ್ಲದೆ ಭಾರತದ ಅಭಿವೃದ್ಧಿಯನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ ಎಂದಿದ್ದಾರೆ.
ಆಂಧ್ರಪ್ರದೇಶದ ತಿರುಪತಿಯಲ್ಲಿ ನಿನ್ನೆ ನಡೆದ ದಕ್ಷಿಣ ವಲಯ ಮಂಡಳಿಯ 29ನೇ ಸಭೆಯ ಅಧ್ಯಕ್ಷತೆಯನ್ನು ಗೃಹ ಸಚಿವರು ವಹಿಸಿದ್ದರು. ಈ ಸಭೆಯಲ್ಲಿ ಆಂಧ್ರಪ್ರದೇಶ, ಕರ್ನಾಟಕ ಮತ್ತು ಪುದುಚೇರಿ ಮುಖ್ಯಮಂತ್ರಿಗಳು ಮತ್ತು ಕೇರಳ, ತಮಿಳುನಾಡು ಮತ್ತು ತೆಲಂಗಾಣ ಸಿಎಂಗಳು ಮತ್ತು ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ಮತ್ತು ಲಕ್ಷದ್ವೀಪ್ನ ಲೆಫ್ಟಿನೆಂಟ್ ಗವರ್ನರ್ಗಳಿಂದ ನಿಯೋಜಿತವಾಗಿರುವ ಹಿರಿಯ ಸಚಿವರು ಭಾಗವಹಿಸಿದ್ದರು.
ದಕ್ಷಿಣ ವಲಯ ಕೌನ್ಸಿಲ್ ಸಭೆಯಲ್ಲಿ 51 ಬಾಕಿ ಉಳಿದಿರುವ ಸಮಸ್ಯೆಗಳ ಪೈಕಿ 40 ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಶಾ ಹೇಳಿದ್ದಾರೆ.
ಸಭೆಯಲ್ಲಿ ಭಾಷಣದ ಆರಂಭವನ್ನು ತಮ್ಮ ತಮ್ಮ ಸ್ವಂತ ರಾಜ್ಯದ ಭಾಷೆಯಲ್ಲಿ ಮಾಡುವಂತೆ ಪ್ರತಿನಿಧಿಗಳನ್ನು ಶಾ ಒತ್ತಾಯಿಸಿದ್ದರು.
ಕೇಂದ್ರದ ಸಹಭಾಗಿತ್ವದಲ್ಲಿ ಕೋವಿಡ್ -19 ವಿರುದ್ಧ ಹೋರಾಡಲು ರಾಜ್ಯಗಳಿಗೆ ಮನ್ನಣೆ ನೀಡಲಾಗಿದೆ. ಸಾಂಕ್ರಾಮಿಕ ರೋಗ ಪ್ರಾರಂಭವಾದಾಗ ಭಾರತಕ್ಕೆ ಅದನ್ನು ನಿಭಾಯಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಲಾಗಿತ್ತು. ಆದರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ತನ್ನ ಆರೋಗ್ಯ ಮೂಲಸೌಕರ್ಯ ಮತ್ತು ಲಸಿಕೆಗಳ ದೇಶೀಯ ಉತ್ಪಾದನೆಯನ್ನು ತ್ವರಿತವಾಗಿ ಹೆಚ್ಚಿಸಿತು ಮತ್ತು ಈಗ ನಾವು ಸಾಂಕ್ರಾಮಿಕ ರೋಗದ ಭಯವನ್ನು ನಿವಾರಿಸಿದ್ದೇವೆ ಮತ್ತು ಕೇಂದ್ರ ಸರ್ಕಾರವು ಲಸಿಕೆ ಕಾರ್ಯಕ್ರಮದ ಅಡಿಯಲ್ಲಿ ಎಲ್ಲಾ ರಾಜ್ಯಗಳನ್ನು ಒಳಗೊಳ್ಳಲು ಸಾಧ್ಯವಿರುವ ಎಲ್ಲವನ್ನೂ ಮಾಡುವುದನ್ನು ಮುಂದುವರಿಸುತ್ತದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.