ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ, ನವೆಂಬರ್ 28 ರಂದು ಸರ್ವಪಕ್ಷಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಮುಂಬರುವ ಸಂಸತ್ತಿನ ಅಧಿವೇಶನವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ್ದು ಸೇರಿದಂತೆ ಹಲವಾರು ವಿಷಯಗಳತ್ತ ಗಮನ ಹರಿಸಲಿದೆ. ಕಳೆದ ವಾರ ಪ್ರಧಾನಿ ಮೋದಿ ಕೃಷಿ ಮಸೂದ ಹಿಂಪಡೆಯುವ ನಿರ್ಧಾರದ ಕುರಿತು ಘೋಷಣೆ ಮಾಡಿದ್ದರು.
ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ, 2019 ಅನ್ನು ಕೂಡ ಈ ಅಧಿವೇಶನದಲ್ಲಿ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆ ಇದೆ. ಮಸೂದೆಯ ಕರಡು ವರದಿಯನ್ನು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸೋಮವಾರ ಅಂಗೀಕರಿಸಿದೆ.
ಇದೇ ದಿನ ಬಿಜೆಪಿ ತನ್ನ ಸಂಸದೀಯ ಕಾರ್ಯಕಾರಿಣಿ ಸಭೆಯನ್ನು ಸಂಜೆ ನಡೆಸಲು ನಿರ್ಧರಿಸಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಎನ್ಡಿಎ ನಾಯಕರು ಸಭೆ ನಡೆಸುವ ನಿರೀಕ್ಷೆಯಿದ್ದು, ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ. ಎರಡೂ ಸಭೆಗಳಲ್ಲೂ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಕಾನೂನುಗಳನ್ನು ಹಿಂದೆಗೆದುಕೊಳ್ಳುವುದು ದೊಡ್ಡ ಚರ್ಚೆಯಾಗಲಿದ್ದು, ಇದಕ್ಕಾಗಿ ಸಂಪುಟ ಬುಧವಾರ ಮಸೂದೆಯನ್ನು ಅಂಗೀಕರಿಸುವ ನಿರೀಕ್ಷೆಯಿದೆ. ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಪ್ರಾತಿನಿಧ್ಯದ ಅಗತ್ಯವಿರುವ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.