
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ವರ್ಷ ಮೇ-ಜೂನ್ನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವಿವಿಧ ರಾಜಕೀಯ ಪಕ್ಷಗಳು ಆಗಸ್ಟ್ 5, 2019 ರಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಮೊದಲ ಬಾರಿಗೆ ತಮ್ಮ ಅಸ್ತಿತ್ವವನ್ನು ವಿಸ್ತರಿಸುತ್ತಾ ಗಭನಹರಿಸುತ್ತಿವೆ.
ಡಿಲಿಮಿಟೇಶನ್ ಆಯೋಗವು ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲವು ಹಳೆಯ ವಿಧಾನಸಭಾ ಸ್ಥಾನಗಳ ಹೊಸ ಮತ್ತು ಮರು-ಜೋಡಣೆಯ ಕರಡು ವರದಿಯನ್ನು ಪೂರ್ಣಗೊಳಿಸಿದೆ ಎಂದು ಉನ್ನತ ಮೂಲಗಳು ಸೂಚಿಸುತ್ತಿವೆ.
ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ರಂಜನಾ ದೇಸಾಯಿ ಅವರು ಆಯೋಗದ ನೇತೃತ್ವ ವಹಿಸಿದ್ದಾರೆ.
“ಕರಡು ವರದಿ ಸಿದ್ಧವಾಗಿದೆ. ಇದನ್ನು ಈಗ ನ್ಯಾಷನಲ್ ಕಾನ್ಫರೆನ್ಸ್ನ ಮೂವರು ಲೋಕಸಭಾ ಸದಸ್ಯರುಮತ್ತು ಬಿಜೆಪಿಯ ಜಿತೇಂದ್ರ ಸಿಂಗ್ ಮತ್ತು ಜುಗಲ್ ಕಿಶೋರ್ ಶರ್ಮಾ ಸೇರಿದಂತೆ ಸಹವರ್ತಿ ಸದಸ್ಯರೊಂದಿಗೆ ಹಂಚಿಕೊಳ್ಳಲಾಗುತ್ತದೆ” ಎಂದು ಮೂಲಗಳು ತಿಳಿಸಿವೆ.
ನ್ಯಾಷನಲ್ ಕಾನ್ಫರೆನ್ಸ್ (NC), ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಭಾರತೀಯ ಜನತಾ ಪಕ್ಷ (BJP) ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ (INC), J&K ನ್ಯಾಷನಲ್ ಪ್ಯಾಂಥರ್ಸ್ ಪಾರ್ಟಿ (JKNPP), J&K ಅಪ್ನಿ ಪಾರ್ಟಿ, ಪೀಪಲ್ಸ್ ಕಾನ್ಫರೆನ್ಸ್ (PC) ನಾಯಕರು ಸೇರಿದಂತೆ ಎಲ್ಲಾ ಪ್ರಮುಖ ರಾಜಕೀಯ ನಾಯಕರು ಮತ್ತು ಇತರ ಸಣ್ಣ ಗುಂಪುಗಳು ಸಭೆಗಳು ಮತ್ತು ಸಮಾವೇಶಗಳ ಮೂಲಕ ಸಾರ್ವಜನಿಕ ಸಂವಹನಗಳನ್ನು ಪ್ರಾರಂಭಿಸಿವೆ.
ವಿಧಾನಸಭೆ ಚುನಾವಣೆಯನ್ನು ಮತ್ತಷ್ಟು ಮುಂದೂಡಲಾಗುವುದಿಲ್ಲ ಎಂದು ಬಿಜೆಪಿ ಈಗಾಗಲೇ ತನ್ನ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದೆ ಮತ್ತು ಪ್ರತಿ ವರ್ಷ ಜೂನ್ ಕೊನೆಯ ವಾರದಲ್ಲಿ ಪ್ರಾರಂಭವಾಗುವ ವಾರ್ಷಿಕ ಅಮರನಾಥ ಯಾತ್ರೆಗೆ ಮುನ್ನ ಮುಂದಿನ ಚುನಾವಣೆ ನಡೆಸಲಾಗುವುವ ಸಾಧ್ಯತೆ ಇದೆ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


