
ನವದೆಹಲಿ: ನಾಳೆಯಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆಯನ್ನು ನಡೆಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ನವೆಂಬರ್ 29 ರಿಂದ 17ನೇ ಲೋಕಸಭೆಯ ಏಳನೇ ಅಧಿವೇಶನ ಆರಂಭವಾಗುತ್ತಿದೆ. ಡಿಸೆಂಬರ್ 23ರಂದು ಅಧಿವೇಶನ ಅಂತ್ಯವಾಗಲಿದೆ.
ಅಧಿವೇಶನದಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ನಿಟ್ಟಿನಲ್ಲಿ ಮಸೂದೆ ಮಂಡನೆ ಮಾಡಲಾಗುತ್ತದೆ. ಮಾತ್ರವಲ್ಲದೆ, ಕೋವಿಡ್ ಲಸಿಕೆ ಭದ್ರತೆ, ಇಂಧನ ಬೆಲೆ ಏರಿಕೆ ಮುಂತಾದ ವಿಷಯಗಳು ಇಲ್ಲಿ ಚರ್ಚೆಗೆ ಒಳಪಡುವ ಸಾಧ್ಯತೆ ಇದೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಪ್ರತಿ ನಡೆಯನ್ನು ವಿರೋಧಿಸಿಕೊಂಡು ಬಂದಿರುವ ಪ್ರತಿಪಕ್ಷಗಳು ಈ ಬಾರಿಯೂ ಸಂಸತ್ತಿನ ಅಧಿವೇಶನ ಸಮರ್ಪಕವಾದ ರೀತಿಯಲ್ಲಿ ನಡೆಯದಂತೆ ಮಾಡಲು ಕಾರ್ಯತಂತ್ರವನ್ನು ರೂಪಿಸಿವೆ. ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಸಭೆ ಸೇರುವ ಸಾಧ್ಯತೆ ಇದೆ.
ಇನ್ನೊಂದೆಡೆ ಪ್ರತಿಪಕ್ಷಗಳ ಎಲ್ಲಾ ಕಾರ್ಯತಂತ್ರವನ್ನು ಬುಡಮೇಲು ಮಾಡಿ ಮಹತ್ವದ ಮಸೂದೆಗಳನ್ನು ಮಂಡಿಸಲು ಮತ್ತು ಅಧಿವೇಶನವನ್ನು ಫಲಪ್ರದಗೊಳಿಸಲು ಸರ್ವ ಪ್ರಯತ್ನಗಳನ್ನು ನಡೆಸಲು ಸರ್ಕಾರ ಮುಂದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


