
ನವದೆಹಲಿ: ಇಂದಿನಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ನಮ್ಮ ಸರ್ಕಾರ ಸಿದ್ಧವಿದೆ. ಆದರೆ ಸದನ ಮತ್ತು ಸ್ಪೀಕರ್ನ ಘನತೆಯ ಬಗ್ಗೆ ಪ್ರತಿಪಕ್ಷಗಳು ಗಮನಹರಿಸಬೇಕೆಂದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಒತ್ತಾಯಿಸಿದ್ದಾರೆ
“ಸರ್ಕಾರವು ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಸಿದ್ಧವಾಗಿದೆ, ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ಸಹ ಸಿದ್ಧವಾಗಿದೆ. ನಮಗೆ ಸಂಸತ್ತಿನಲ್ಲಿ ಪ್ರಶ್ನೆಗಳೂ ಬೇಕು ಮತ್ತು ಶಾಂತಿಯೂ ಬೇಕು. ಸರ್ಕಾರ ಅಥವಾ ಸರ್ಕಾರದ ನೀತಿಗಳ ವಿರುದ್ಧ ಯಾವುದೇ ಧ್ವನಿ ಇದ್ದರೂ ಸಂಸತ್ತಿನ ಘನತೆ ಮತ್ತು ಸ್ಪೀಕರ್ ಸ್ಥಾನದ ಗೌರವವನ್ನು ಎತ್ತಿಹಿಡಿಯಬೇಕು. ನಾವು ಯುವ ಪೀಳಿಗೆಗೆ ಸ್ಫೂರ್ತಿ ನೀಡುವ ರೀತಿಯ ನಡವಳಿಕೆಯನ್ನು ಕಾಪಾಡಿಕೊಳ್ಳಬೇಕು” ಎಂದು ಪ್ರಧಾನಿ ಮೋದಿ ಅವರು ಅಧಿವೇಶನದ ಮೊದಲು ತಮ್ಮ ಹೇಳಿಕೆಯಲ್ಲಿ ಹೇಳಿದ್ದಾರೆ.
ಈ ಬಿಕ್ಕಟ್ಟಿನ ಸಮಯದಲ್ಲಿ ಪ್ರತಿಯೊಬ್ಬರ ಆರೋಗ್ಯವು ಆದ್ಯತೆಯಾಗಿರುವುದರಿಂದ ಎಲ್ಲಾ ಸಂಸದರು ಮತ್ತು ಇತರರು ಜಾಗರೂಕರಾಗಿರಬೇಕು ಎಂದು ಪ್ರಧಾನಿಯವರು ಹೊಸ ಕೋವಿಡ್ ರೂಪಾಂತರ ‘ಒಮಿಕ್ರಾನ್’ ಹಿನ್ನಲೆಯಲ್ಲಿ ಎಚ್ಚರಿಕೆಯನ್ನು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


