
ನವದೆಹಲಿ: ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಪ್ರಧಾನ ಮಂತ್ರಿಗಳ ಅಭಿವೃದ್ಧಿ ಪ್ಯಾಕೇಜ್-2015 ರ ಅಡಿಯಲ್ಲಿ ಉದ್ಯೋಗಗಳನ್ನು ಪಡೆದುಕೊಳ್ಳಲು ಸುಮಾರು 1,678 ಹಿಂದೂ ವಲಸಿಗರು ಕಾಶ್ಮೀರಕ್ಕೆ ಮರಳಿದ್ದಾರೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ.
ಇದಲ್ಲದೆ, ವಲಸಿಗ ಹಿಂದೂಗಳಿಗೆ ಪೂರ್ವಜರ ಆಸ್ತಿಯನ್ನು ಪುನಃ ಒದಗಿಸಿಕೊಡಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.
“ಜಮ್ಮು-ಕಾಶ್ಮೀರ ವಲಸಿಗರ ಸ್ಥಿರಾಸ್ತಿ (ಸಂರಕ್ಷಣೆ, ರಕ್ಷಣೆ ಮತ್ತು ಮಾರಾಟದ ಮೇಲಿನ ನಿರ್ಬಂಧ) ಕಾಯ್ದೆ, 1997 ರ ಅಡಿಯಲ್ಲಿ, ಜಮ್ಮು ಮತ್ತು ಕಾಶ್ಮೀರದಲ್ಲಿನ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳು ವಲಸಿಗರ ಸ್ಥಿರ ಆಸ್ತಿಗಳ ಕಾನೂನುಬದ್ಧ ಪಾಲಕರು, ಅವರು ಸ್ವಯಂ ಕ್ರಮವನ್ನು ತೆಗೆದುಕೊಂಡು ಅತಿಕ್ರಮಣ ಪ್ರಕರಣಗಳನ್ನು ತೆರವುಗೊಳಿಸುವ ಪ್ರಕ್ರಿಯೆ ನಢೆಸುತ್ತಾರೆ. ವಲಸಿಗರು ಅವರಿಗೆ ಮನವಿ ಮಾಡಿ ತಮ್ಮ ಆಸ್ತಿ ಮರಳಿ ಪಡೆಯಬಹುದು. ಅಂತಹ ಆಸ್ತಿಗಳ ಸಂರಕ್ಷಣೆ ಮತ್ತು ರಕ್ಷಣೆಗಾಗಿ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಗಳಿಗೆ ಹೆಚ್ಚಿನ ಅಧಿಕಾರವಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್ ಲೋಕಸಭೆಯಲ್ಲಿ ಹೇಳಿದ್ದಾರೆ.
“ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಒದಗಿಸಿದ ಮಾಹಿತಿಯ ಪ್ರಕಾರ, 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಒಟ್ಟು 1678 ವಲಸಿಗರು ಪ್ರಧಾನ ಮಂತ್ರಿಗಳ ಅಭಿವೃದ್ಧಿ ಪ್ಯಾಕೇಜ್-2015 ರ ಅಡಿಯಲ್ಲಿ ಉದ್ಯೋಗಗಳನ್ನು ತೆಗೆದುಕೊಳ್ಳಲು ಕಾಶ್ಮೀರಕ್ಕೆ ಮರಳಿದ್ದಾರೆ” ಎಂದು ರಾಯ್ ಹೇಳಿದ್ದಾರೆ.
ಇದುವರೆಗೆ 150 ಅರ್ಜಿದಾರರ ಜಮೀನನ್ನು ಅಧಿಕಾರಿಗಳು ಮರಳಿ ನೀಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಇದಲ್ಲದೆ, ಈ ನಿಟ್ಟಿನಲ್ಲಿ ಕಾಶ್ಮೀರಿ ವಲಸಿಗರ ಕುಂದುಕೊರತೆಗಳನ್ನು ಪರಿಹರಿಸಲು ಜಮ್ಮು-ಕಾಶ್ಮೀರ ಸರ್ಕಾರವು ಈ ವರ್ಷದ ಸೆಪ್ಟೆಂಬರ್ 7 ರಂದು ಪೋರ್ಟಲ್ ಅನ್ನು ಪ್ರಾರಂಭಿಸಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


