
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹಗಳು ನವೆಂಬರ್ನಲ್ಲಿ 1.31 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿದ್ದು, ಇದು ಆರ್ಥಿಕ ಚೇತರಿಕೆಯ ಪ್ರವೃತ್ತಿಗೆ ಅನುಗುಣವಾಗಿದೆ ಎಂದು ವಿಶ್ಲೇಷಿಸಲಾಗಿದೆ. ಜುಲೈ 2017 ರಲ್ಲಿ ಜಿಎಸ್ಟಿ ಜಾರಿಯಾದ ನಂತರದ ಎರಡನೇ ಅತಿ ಹೆಚ್ಚು ಸಂಗ್ರಹ ಇದೆಂದು ಹಣಕಾಸು ಸಚಿವಾಲಯ ಬುಧವಾರ ತಿಳಿಸಿದೆ.
“ನವೆಂಬರ್ 2021 ರಲ್ಲಿ ಒಟ್ಟು ಜಿಎಸ್ಟಿ ಆದಾಯವು ರೂ 1,31,526 ಕೋಟಿಗಳಾಗಿದ್ದು, ಇದರಲ್ಲಿ CGST ರೂ 23,978 ಕೋಟಿಗಳು, SGST ರೂ 31,127 ಕೋಟಿಗಳು, IGST ರೂ 66,815 ಕೋಟಿಗಳು (ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ ರೂ 32,165 ಕೋಟಿಗಳು ಸೇರಿದಂತೆ) ಮತ್ತು ಸೆಸ್ ರೂ 9,606 ಕೋಟಿ (ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ ರೂ 653 ಕೋಟಿ ಸೇರಿದಂತೆ)” ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
CGST ಕೇಂದ್ರ ಸರಕು ಮತ್ತು ಸೇವಾ ತೆರಿಗೆ, SGST ರಾಜ್ಯ ಸರಕು ಮತ್ತು ಸೇವಾ ತೆರಿಗೆ ಮತ್ತು IGST ಸಂಯೋಜಿತ ಸರಕು ಮತ್ತು ಸೇವಾ ತೆರಿಗೆಯಾಗಿದೆ .
ನವೆಂಬರ್ 2021 ರ ಜಿಎಸ್ಟಿ ಆದಾಯವು ನವೆಂಬರ್ 2020 ಕ್ಕಿಂತ 25 ಶೇಕಡಾ ಹೆಚ್ಚಾಗಿದೆ ಮತ್ತು ನವೆಂಬರ್ 2019 ಕ್ಕಿಂತ 27 ಶೇಕಡಾ ಹೆಚ್ಚಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


