
ಬೆಂಗಳೂರು: ಸಾವಯವ ಮತ್ತು ಸಿರಿಧಾನ್ಯ ಉತ್ಪಾದನೆಯೊಂದಿಗೆ ಜನರಿಗೆ ಆರೋಗ್ಯದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಕೃಷಿ ಇಲಾಖೆ ಹಲವು ಹೊಸಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದೆ.
ಇದೀಗ ಅದರ ಮುಂದುವರೆದ ಭಾಗವಾಗಿ ರೈತೋತ್ಪಾದಕರು ಹಾಗೂ ಗ್ರಾಹಕರ ನಡುವೆ ಸಂಪರ್ಕ ಏರ್ಪಡಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆ , ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಹಾಗೂ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಸಹಯೋಗದೊಂದಿಗೆ ಸಾವಯವ ಹಾಗೂ ಸಿರಿಧಾನ್ಯ ಮೇಳ ಹಮ್ಮಿಕೊಳ್ಳಲಾಗಿದೆ.
ಇದೇ ಶನಿವಾರ ಡಿ.4 ಮತ್ತು 5 ರಂದು ಎರಡು ದಿನಗಳ ಕಾಲ ಬೆಂಗಳೂರಿನ ಕೆ.ಎ.ಎಸ್ ಅಧಿಕಾರಿಗಳ ಸಂಘ ಇಲ್ಲಿ ಮೇಳ ಆಯೋಜನೆಗೊಂಡಿದೆ.ಸಾವಯವ ಮತ್ತು ಸಿರಿಧಾನ್ಯ ಮೇಳಕ್ಕೆ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಉದ್ಘಾಟನೆ ನೆರವೇರಿಸಲಿದ್ದು, ಮೇಳದಲ್ಲಿ ಸಾವಯವ ಹಾಗೂ ಸಿರಿಧಾನ್ಯ ಬೆಳೆಯಲ್ಲಿ ಸಾಧನೆಗೈದ ಪ್ರಗತಿಪರ ರೈತರಿಂದ ವಿಚಾರ ವಿನಿಮಯ, ಸಾವಯವ ಸಿರಿಧಾನ್ಯ ಕೃಷಿಯ ಮಹತ್ವವನ್ನು ಸಾರಲಾಗುತ್ತಿದೆ. ಇದರೊಂದಿಗೆ ಮೇಳದಲ್ಲಿ ಈ ಉತ್ಪನ್ನಗಳ ವಸ್ತುಪ್ರದರ್ಶನ ಸಹ ಹಮ್ಮಿಕೊಳ್ಳಲಾಗಿದೆ.
ಸಾವಯವ ಪದಾರ್ಥಗಳನ್ನು ಉಪಯೋಗಿಸುವದರಿಂದ ಆಗುವ ಪ್ರಯೋಜನ ಗಳ ಬಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ ಮತ್ತು ಈ ಸಾವಯವ ಕೃಷಿ ಯಿಂದ ಸಿಗುವ ಪದಾರ್ಥಗಳು ನಮ್ಮ ಸದೃಢ ಮತ್ತು ಆರೋಗ್ಯ ಯುತ ಬದುಕು ನಿರ್ಮಾಣ ಮಾಡುವಲ್ಲಿ ಸಹಕಾರಿಯಾಗುತ್ತದೆ ಎನ್ನುವ ಬಯಕೆ ನಮ್ಮದು. ಆ ದಿಸೆಯಲ್ಲಿ ಆರೋಗ್ಯ ಔಷಧಿಗಾಗಿ ಮತ್ತು ದೇಹಕ್ಕೆ ಅತಿ ಉಪಯುಕ್ತ ಸಿರಿಧಾನ್ಯ ಮತ್ತು ದವಸ ಧಾನ್ಯ ಬೆಳೆಗಳ ಉಪಯೋಗದ ಬಗೆ ಮಾಹಿತಿ ನೀಡಲಾಗುತ್ತಿದೆ.ಅಲ್ಲದೆ ಇವುಗಳ ಕೃಷಿ ಬಳಕೆಯಿಂದ ಆಗುವ ಲಾಭಾಂಶದ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲು ಹಂಚಿಕೊಳ್ಳಲು ಮೇಳ ಉಪಯುಕ್ತವಾಗಲಿದೆ.ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


