ನವದೆಹಲಿ: ಕೊರೋನಾವೈರಸ್ ವಿರುದ್ಧ ವಿಶ್ವದ ಅತಿದೊಡ್ಡ ಅಭಿಯಾನ ನಡೆಸುತ್ತಿರುವ ಭಾರತ ಅತಿ ದೊಡ್ಡ ಮೈಲುಗಲ್ಲು ಸಾಧಿಸಿದೆ. ತನ್ನ ಅರ್ಹ ಜನಸಂಖ್ಯೆಯ 50% ಜನರಿಗೆ ಸಂಪೂರ್ಣ ಲಸಿಕೆಯನ್ನು ನೀಡಿದೆ.
ಭಾರತದ ಲಸಿಕಾ ಅಭಿಯಾನ ಮಹತ್ವದ ಮೈಲುಗಲ್ಲು ಸಾಧಿಸಿದೆ. 50% ಅರ್ಹ ಜನಸಂಖ್ಯೆ ಪ್ರಸ್ತುತ ಸಂಪೂರ್ಣವಾಗಿ ಲಸಿಕೆ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮಾನ್ಸೂಕ್ ಮಾಂಡವೀಯ ಅವರು ತಿಳಿಸಿದ್ದಾರೆ.
ಭಾರತದ ಲಸಿಕ ವ್ಯಾಪ್ತಿ 127.61 ಕೋಟಿ ದಾಟಿದೆ ಎಂದು ಆರೋಗ್ಯ ಸಚಿವಾಲಯದ ದತ್ತಾಂಶ ತಿಳಿಸಿದೆ.
“ಭಾರತದ ವ್ಯಾಕ್ಸಿನೇಷನ್ ಡ್ರೈವ್ ಮತ್ತೊಂದು ಪ್ರಮುಖ ಮೈಲಿಗಲ್ಲನ್ನು ದಾಟಿದೆ. ಕೋವಿಡ್-19 ವಿರುದ್ಧದ ಹೋರಾಟವನ್ನು ಬಲಪಡಿಸಲು ಈ ವೇಗವನ್ನು ಉಳಿಸಿಕೊಳ್ಳುವುದು ಮುಖ್ಯವಾಗಿದೆ. ಸಾಮಾಜಿಕ ಅಂತರ ಸೇರಿದಂತೆ ಎಲ್ಲಾ ಇತರ ಕೋವಿಡ್-19 ಸಂಬಂಧಿತ ಪ್ರೋಟೋಕಾಲ್ಗಳನ್ನು ಅನುಸರಿಸಿ” ಎಂದು ಮೋದಿ ಟ್ವಿಟ್ ಮಾಡಿದ್ದಾರೆ.
India’s vaccination drive crosses another important milestone. Important to keep this momentum to strengthen the fight against COVID-19.
And yes, keep following all other COVID-19 related protocols including masking up and social distancing. https://t.co/a26Cy65Jv2
— Narendra Modi (@narendramodi) December 6, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.