ನವದೆಹಲಿ: ರಕ್ಷಣಾ ಪಡೆಗಳ ಮುಖ್ಯಸ್ಥ, ಅವರ ಪತ್ನಿ ಮತ್ತು ಅವರ ಜೊತೆಗಿದ್ದ ಇತರ 12 ಮಂದಿ ಸಿಬ್ಬಂದಿಗಳು ಇಂದು ನಡೆದ ಹೆಲಿಕಾಪ್ಟರ್ ಪತನದಲ್ಲಿ ಮೃತಪಟ್ಟಿದ್ದಾರೆ ಎಂಬುದಾಗಿ ವಾಯುಸೇನೆ ಟ್ವಿಟರ್ ಮೂಲಕ ದೃಢಪಡಿಸಿದೆ.
ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ವಿಮಾನ ಪತನಗೊಂಡಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯ ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ವಾಯುಸೇನೆ ಟ್ವೀಟ್ ಮಾಡಿ ಮಾಹಿತಿ ಹೊರಹಾಕಿದೆ.
ಇತರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
” ಜನರಲ್ ಬಿಪಿನ್ ರಾವತ್, ಶ್ರೀಮತಿ ಮಧುಲಿಕಾ ರಾವತ್ ಮತ್ತು ವಿಮಾನದಲ್ಲಿದ್ದ ಇತರ 11 ಜನರು ದುರದೃಷ್ಟಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಈಗ ವಿಷಾದದೊಂದಿಗೆ ಖಚಿತಪಡಿಸಲಾಗಿದೆ” ಎಂದು ವಾಯುಸೇನೆ ಟ್ವಿಟ್ ಮಾಡಿದೆ.
ಜನರಲ್ ಬಿಪಿನ್ ರಾವತ್, ಅವರು ಇಂದು ಸ್ಟಾಫ್ ಕೋರ್ಸ್ನ ಅಧ್ಯಾಪಕರು ಮತ್ತು ವಿದ್ಯಾರ್ಥಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಲು ವೆಲ್ಲಿಂಗ್ಟನ್ (ನೀಲಗಿರಿ ಹಿಲ್ಸ್) ಡಿಫೆನ್ಸ್ ಸರ್ವಿಸ್ ಸ್ಟಾಫ್ ಕಾಲೇಜಿಗೆ ಭೇಟಿ ನೀಡುತ್ತಿದ್ದರು ಎಂದಿದೆ.
With deep regret, it has now been ascertained that Gen Bipin Rawat, Mrs Madhulika Rawat and 11 other persons on board have died in the unfortunate accident.
— Indian Air Force (@IAF_MCC) December 8, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.