ನವದೆಹಲಿ: 2022 ರಲ್ಲಿ ಚೀನಾದ ಬೀಜಿಂಗ್ನಲ್ಲಿ ನಡೆಯಲಿರುವ ಚಳಿಗಾಲದ ಒಲಿಂಪಿಕ್ ಕ್ರೀಡಾಕೂಟಕ್ಕೆ ರಾಜತಾಂತ್ರಿಕ ಬಹಿಷ್ಕಾರ ಹಾಕಿದ ದೇಶಗಳ ಪಟ್ಟಿಗೆ ಇದೀಗ ಕೆನಡಾ ಕೂಡ ಸೇರ್ಪಡೆಗೊಂಡಿದೆ.
ಮಾನವ ಹಕ್ಕುಗಳ ದಮನದ ಕಾರಣದಿಂದಾಗಿ ಬೀಜಿಂಗ್ ವಿಂಟರ್ ಒಲಿಂಪಿಕ್ಸ್ಗೆ ರಾಜತಾಂತ್ರಿಕ ಬಹಿಷ್ಕಾರ ಹಾಕುವುದಾಗಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರಡೋ ತಿಳಿಸಿದ್ದಾರೆ.
ಕ್ಸಿನ್ಜಿಯಾಂಗ್ ಪ್ರಾಂತ್ಯದಲ್ಲಿ ಚೀನಾ ನಡೆಸುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಹಲವಾರು ಅಮಾನವೀಯ ಕಾರ್ಯಗಳನ್ನು ವಿರೋಧಿಸಿ ಅಮೆರಿಕಾ, ಯುಕೆ, ಆಸ್ಟ್ರೇಲಿಯಾ ಬೀಜಿಂಗ್ ವಿಂಟರ್ ಒಲಿಂಪಿಕ್ಸ್ಗೆ ರಾಜತಾಂತ್ರಿಕ ಬಹಿಷ್ಕಾರ ಘೋಷಿಸಿವೆ. ಇದೀಗ ಕೆನಡಾ ಕೂಡ ಬಹಿಷ್ಕಾರವನ್ನು ಘೋಷಣೆ ಮಾಡಿದೆ. ಕೋವಿಡ್ ಕಾರಣದಿಂದಾಗಿ ಅಧಿಕಾರಿಗಳನ್ನು ಕ್ರೀಡಾಕೂಟಕ್ಕೆ ಕಳುಹಿಸುವುದಿಲ್ಲ ಎಂದು ನ್ಯೂಜಿಲೆಂಡ್ ದೃಢಪಡಿಸಿದೆ.
ರಾಜತಾಂತ್ರಿಕ ಬಹಿಷ್ಕಾರ ಘೋಷಣೆ ಮಾಡಿದ ರಾಷ್ಟ್ರಗಳ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಸ್ವತಂತ್ರರು. ಆದರೆ ಅವರೊಂದಿಗೆ ಸರ್ಕಾರದ ಯಾವುದೇ ಅಧಿಕಾರಿಗಳ ನಿಯೋಗ ತೆರಳವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಜಪಾನ್ ಮತ್ತು ಇತರ ರಾಷ್ಟ್ರಗಳು ಕೂಡ ಕ್ರೀಡಾಕೂಟಕ್ಕೆ ರಾಜತಾಂತ್ರಿಕ ಬಹಿಷ್ಕಾರಗಳನ್ನು ಪರಿಗಣಿಸುತ್ತಿವೆ ಎಂದು ಹೇಳಲಾಗುತ್ತಿದೆ.
ಈ ನಿರ್ಧಾರಗಳು ಚೀನಾಗೆ ತೀವ್ರ ಮುಖಭಂಗವನ್ನು ಉಂಟು ಮಾಡಿದ್ದು, ಇದಕ್ಕೆ ತಕ್ಕ ಪ್ರತಿಕ್ರಿಯೆ ನೀಡಲಾಗುವುದು ಎಂದು ಅದು ಎಚ್ಚರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.