ವಾರಣಾಸಿ: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಗೆ ಮೂರ ದಿನಗಳ ಭೇಟಿಯಲ್ಲಿದ್ದು, ಸೋಮವಾರ ತಡರಾತ್ರಿ ಬನಾರಸ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವ ಅವರು, “ಮುಂದಿನ ನಿಲುಗಡೆ ಬನಾರಸ್ ನಿಲ್ದಾಣ. ನಾವು ರೈಲು ಸಂಪರ್ಕವನ್ನು ಹೆಚ್ಚಿಸಲು ಹಾಗೂ ಸ್ವಚ್ಛ, ಆಧುನಿಕ ಮತ್ತು ಪ್ರಯಾಣಿಕರ ಸ್ನೇಹಿ ರೈಲು ನಿಲ್ದಾಣಗಳನ್ನು ಖಚಿತಪಡಿಸಿಕೊಳ್ಳಲು ಕೆಲಸ ಮಾಡುತ್ತಿದ್ದೇವೆ” ಎಂದಿದ್ದಾರೆ.
“ಕಾಶಿಯಲ್ಲಿ ಪ್ರಮುಖ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸುತ್ತಿದ್ದೇನೆ. ಈ ಪವಿತ್ರ ನಗರಕ್ಕೆ ಸಾಧ್ಯವಾದಷ್ಟು ಉತ್ತಮ ಮೂಲಸೌಕರ್ಯಗಳನ್ನು ಸೃಷ್ಟಿಸುವುದು ನಮ್ಮ ಪ್ರಯತ್ನವಾಗಿದೆ” ಎಂದಿದ್ದಾರೆ.
ಟ್ವಿಟ್ ಜೊತೆ ವಿವಿಧ ಫೋಟೋಗಳನ್ನು ಕೂಡ ಮೋದಿ ಹಂಚಿಕೊಂಡಿದ್ದಾರೆ.
ಪರಿಶೀಲನೆಗಳ ವೇಳೆ ಪ್ರಧಾನಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಅನೇಕರು ಸಾಥ್ ನೀಡಿದರು.
ಇಂದು ಉತ್ತಮ ಆಡಳಿತ ಕುರಿತ ಸಮ್ಮೇಳನದೇಶದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವ ವಹಿಸಲಿದ್ದಾರೆ. ಈ ವೇಳೆ ಉತ್ತಮ ಆಡಳಿತ ಸಂಬಂಧ ಚರ್ಚಿಸಲು ‘ಸುಶಾಸನ ಸಂಗಮ’ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ವೇಳೆ ಕೋವಿಡ್ ನಿರ್ವಹಣೆ ಹಾಗೂ ವ್ಯಾಕ್ಸಿನೇಷನ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಸಲಹೆ, ಸೂಚನೆ ನೀಡಲಿದ್ದಾರೆಂದು ತಿಳಿದು ಬಂದಿದೆ.
ನಿನ್ನೆ ಮೋದಿ ಕಾಶಿ ವಿಶ್ವನಾಥ ಕಾರಿಡಾರ್ ಅನ್ನು ದೇಶಕ್ಕೆ ಸಮರ್ಪಿಸಿದ್ದಾರೆ. ರಾತ್ರಿ ಅವರು ಗಂಗಾ ಆರತಿಯನ್ನು ಕಣ್ತುಂಬಿಕೊಂಡಿದ್ದಾರೆ.
Inspecting key development works in Kashi. It is our endeavour to create best possible infrastructure for this sacred city. pic.twitter.com/Nw3JLnum3m
— Narendra Modi (@narendramodi) December 13, 2021
Next stop…Banaras station. We are working to enhance rail connectivity as well as ensure clean, modern and passenger friendly railway stations. pic.twitter.com/tE5I6UPdhQ
— Narendra Modi (@narendramodi) December 13, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.