ಬೆಂಗಳೂರು: ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಮತ ಎಣಿಕೆ ಕಾರ್ಯ ಆರಂಭವಾಗಿದೆ. ರಾಜ್ಯದ 25 ವಿಧಾನಸಭಾ ಕ್ಷೇತ್ರಗಳಿಗೆ ಮೊನ್ನೆ ಡಿಸೆಂಬರ್ 10ರಂದು ಚುನಾವಣೆ ನಡೆದಿತ್ತು.
ಮತ ಎಣಿಕೆ ಕಾರ್ಯ ಇಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾ ಕೇಂದ್ರಗಳಲ್ಲಿ ಆರಂಭಗೊಂಡಿದೆ. ಸಂಜೆಯೊಳಗೆ 90 ಅಭ್ಯರ್ಥಿಗಳ ಭವಿಷ್ಯ ಬಹುತೇಕ ಖಚಿತವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಮತ್ತು ಬಿಜೆಪಿ 20 ಕ್ಷೇತ್ರಗಳಲ್ಲಿ ಮತ್ತು ಜೆಡಿಎಸ್ 6 ಕ್ಷೇತ್ರಗಳಲ್ಲಿ ಸ್ಪರ್ಧಿಸಿವೆ.
ಕೆಲವು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮೂರು ಸ್ಥಾನಗಳನ್ನು ಪಡೆದುಕೊಂಡಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ತಲಾ ಒಂದು ಸ್ಥಾನಗಳನ್ನು ಗೆದ್ದಿದೆ.
ರಾಜ್ಯದ ಮೂರೂ ಪಕ್ಷಗಳ ರಾಜಕೀಯ ಭವಿಷ್ಯಕ್ಕೆ ಈ ಚುನಾವಣೆ ಮಹತ್ವದ್ದಾಗಿದೆ. ಮುಂದಿನ 2023ರ ವಿಧಾನಸಭೆ ಚುನಾವಣೆಗೂ ದಿಕ್ಸೂಚಿ ಎಂದು ಪರಿಗಣಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.