ಬೆಂಗಳೂರು: ದತ್ತಪೀಠಕ್ಕೆ ಶೀಘ್ರದಲ್ಲೇ ಹಿಂದೂ ಅರ್ಚಕರನ್ನು ನೇಮಕ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.
ಭಾನುವಾರ ದತ್ತಪೀಠದಲ್ಲಿ ಪಾದುಕೆಗಳ ದರ್ಶನ ಪಡೆದು ಮಾತನಾಡಿದ ಅವರು, ದತ್ತಪೀಠಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪನ್ನು ನಮ್ಮ ಸರಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಶೀಘ್ರದಲ್ಲೇ ಹಿಂದೂ ಅರ್ಚಕರ ನೇಮಕಕ್ಕೆ ಸುತ್ತೋಲೆ ಹೊರಡಿಸಲಾಗುತ್ತದೆ ಎಂದಿದ್ದಾರೆ.
ಈಗಾಗಲೇ ಸಂಪುಟದ ಉಪ ಸಮಿತಿಯನ್ನು ರಚನೆ ಮಾಡಲಾಗಿದ್ದು ಇಲ್ಲಿ ಹಿಂದುಗಳು ಯಾವ ಯಾವ ಬೇಡಿಕೆಗಳನ್ನು ಇಟ್ಟಿದ್ದಾರೆ ಅದೆಲ್ಲವನ್ನು ಈಡೇರಿಸಲು ಸರಕಾರ ಬದ್ಧವಾಗಿದೆ ಎಂದಿದ್ದಾರೆ.
ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕ ಆಗಬೇಕು, ತ್ರಿಕಾಲಪೂಜೆ ಆಗಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಗಳು ಕಾನೂನಿನ ಚೌಕಟ್ಟಿನಲ್ಲಿಯೇ ಇದೆ. ಈ ನಿಟ್ಟಿನಲ್ಲಿ ಸಂಪುಟ ಉಪ ಸಮಿತಿಯು ಶೀಘ್ರ ತೀರ್ಮಾನ ತೆಗೆದುಕೊಳ್ಳಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.