ನವದೆಹಲಿ: ಬ್ಯಾಡ್ಮಿಂಟನ್ ತಾರೆ ಕಿಡಂಬಿ ಶ್ರೀಕಾಂತ್ ಅವರು ʻಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಷಿಪ್-2021ʼನಲ್ಲಿ ಬೆಳ್ಳಿ ಪದಕವನ್ನು ಜಯಿಸಿ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ಅವರಿಗೆ ಗಣ್ಯರಿಂದ ಮತ್ತು ಜನರಿಂದ ಅಭಿನಂದನೆಗಳು ಹರಿದು ಬರುತ್ತಿವೆ.
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಭಾನುವಾರ ನಡೆದ ಪುರುಷರ ಸಿಂಗಲ್ಸ್ನಲ್ಲಿ ಭಾರತೀಯ ಬ್ಯಾಡ್ಮಿಂಟನ್ ತಾರೆ ಶ್ರೀಕಾಂತ್ ಅತ್ಯುತ್ತಮ ಪ್ರದರ್ಶನ ನೀಡಿದರೂ ಸಿಂಗಪುರದ ಲೋಹ್ ಕೀನ್ ಯೂ ವಿರುದ್ಧ ನೇರ ಗೇಮ್ ಸೋಲನ್ನು ಅನುಭವಿಸಬೇಕಾಯಿತು. ಆದರೂ ಅವರು ಭಾರತಕ್ಕೆ ಐತಿಹಾಸಿಕ ಬೆಳ್ಳಿ ಪದಕವನ್ನು ನೀಡಿ ಹೆಮ್ಮೆ ತಂದಿದ್ದಾರೆ.
28ರ ಹರೆಯದ ಶ್ರೀಕಾಂತ್ ದಂತಕಥೆ ಪ್ರಕಾಶ್ ಪಡುಕೋಣೆ (1983 ರಲ್ಲಿ ಕಂಚು), ಬಿ ಸಾಯಿ ಪ್ರಣೀತ್ (2019 ರಲ್ಲಿ ಕಂಚು) ಮತ್ತು ಲಕ್ಷ್ಯ ಸೇನ್ (ಇತ್ತೀಚಿಗೆ ಕಂಚು) ಅವರ ಸಾಧನೆಗಳನ್ನು ಮೀರಿದ್ದಾರೆ.
ಕಿಡಂಬಿ ಶ್ರೀಕಾಂತ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೂ ಅಭಿನಂದನೆ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, “ಐತಿಹಾಸಿಕ ಬೆಳ್ಳಿ ಪದಕ ಗೆದ್ದ ಕಿಡಂಬಿ ಶ್ರೀಕಾಂತ್ @srikidambi ಅವರಿಗೆ ಅಭಿನಂದನೆಗಳು. ಈ ಗೆಲುವು ಹಲವಾರು ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ ಮತ್ತು ಬ್ಯಾಡ್ಮಿಂಟನ್ನಲ್ಲಿ ಬಗ್ಗೆ ಆಸಕ್ತಿಯನ್ನು ಮತ್ತಷ್ಟ ಹೆಚ್ಚಿಸುತ್ತದೆ.” ಎಂದಿದ್ದಾರೆ.
Congratulations to @srikidambi for winning a historic Silver Medal. This win will inspire several sportspersons and further interest in badminton. https://t.co/rxxkBDAwkP
— Narendra Modi (@narendramodi) December 20, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.