ಬೆಂಗಳೂರು: ಕರ್ನಾಟಕ ಸರ್ಕಾರ ವನ್ಯಜೀವಿ ಸಂರಕ್ಷಣೆಗೆ ಒತ್ತು ನೀಡುತ್ತಿದೆ, ಕಳೆದ ಎರಡು ವರ್ಷಗಳಲ್ಲಿ ವನ್ಯಜೀವಿಗಳ ಸಂರಕ್ಷಣೆಗೆ 386 ಕೋಟಿ ರೂಪಾಯಿಗಳನ್ನು ವ್ಯಯ ಮಾಡಲಾಗಿದೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಮಾಹಿತಿ ನೀಡಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಅರಣ್ಯ ಇಲಾಖೆಯ ವನ್ಯಜೀವಿಗಳ ಸಂರಕ್ಷಣೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರಲಾಗಿದೆ. ಆನೆ ಹುಲಿ ಚಿರತೆ ಮುಂತಾದ ವನ್ಯಪ್ರಾಣಿಗಳ ಸಂಖ್ಯೆಗಳು ರಾಜ್ಯದಲ್ಲಿ ಹೆಚ್ಚಾಗುತ್ತಿವೆ. 2017ರಲ್ಲಿ ಆನೆ ಗಣತಿಯಂತೆ 6,049 ಆನೆಗಳು ರಾಜ್ಯದಲ್ಲಿವೆ. 2018ರ ಹುಲಿ ಗಣತಿಯಂತೆ 524 ಹುಲಿಗಳು ರಾಜ್ಯದಲ್ಲಿ ಅಭಯಾರಣ್ಯಗಳಲ್ಲಿ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹಂಪ್ ಬ್ಯಾಕ್ ತಿಮಿಂಗಿಲ, ಗ್ರೇಟ್ ಇಂಡಿಯನ್ ಬಸ್ಟರ್ಡ್ ಮುಂತಾದ ಪಕ್ಷಿ ಪ್ರಬೇಧಗಳನ್ನು ಕೂಡ ಸಂರಕ್ಷಣೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ 5 ರಾಷ್ಟ್ರೀಯ ಉದ್ಯಾನವನ, 33 ಅಭಯಾರಣ್ಯ, 14 ಸಂರಕ್ಷಣಾ ಮೀಸಲು ಪ್ರದೇಶ ಹಾಗೂ ಒಂದು ಸಮುದಾಯ ಮೀಸಲು ಪ್ರದೇಶವನ್ನು ವನ್ಯಜೀವಿಗಳ ಸಂರಕ್ಷಣೆಗಾಗಿ ಮೀಸಲಾಗಿಡಲಾಗಿದೆ. ನೀರಿನ ಸೌಕರ್ಯ ಮತ್ತು ಆವಾಸಸ್ಥಾನಗಳನ್ನು ಕೂಡ ಅಭಿವೃದ್ಧಿಪಡಿಸಲಾಗುತ್ತಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.