ನವದೆಹಲಿ: 2022 ರ ಋತುವಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ (MSP) ನೀಡಲು ಕೇಂದ್ರ ಸಚಿವ ಸಂಪುಟವು ತನ್ನ ಅನುಮೋದನೆಯನ್ನು ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ ಈ ಅನುಮೋದನೆಯನ್ನು ಕೊಟ್ಟಿದೆ.
ಮಾಧ್ಯಮ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಈ ಬಗ್ಗೆ ಮಾಹಿತಿ ನೀಡಿ, 2022 ರ ಋತುವಿನಲ್ಲಿ ಪ್ರತಿ ಕ್ವಿಂಟಲ್ ಗಾಣದ ಕೊಬ್ಬರಿಗೆ 10,590 ರೂಪಾಯಿ ಎಂಎಸ್ಪಿ ನಿಗದಿ ಮಾಡಲಾಗಿದೆ. ಇಡೀ ಕೊಬ್ಬರಿಗೆ 11,000 ರೂಪಾಯಿ ನಿಗದಿಪಡಿಸಲಾಗಿದೆ.
ಈ ನಿರ್ಧಾರವು ಕೃಷಿ ವೆಚ್ಚಗಳು ಮತ್ತು ಬೆಲೆಗಳ ಆಯೋಗದ ಶಿಫಾರಸುಗಳನ್ನು ಆಧರಿಸಿದೆ. 2022 ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಪ್ರಮುಖ ಮತ್ತು ಪ್ರಗತಿಪರ ನಿರ್ಧಾರ ಇದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.