ಪಾಲ್ತಾಡಿ : ಸರಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳನ್ನು ಜನತೆ ಸದುಪಯೋಗಪಡಿಸಿಕೊಳ್ಳಬೇಕು, ಇದರಿಂದ ಸರಕಾರದ ಉದ್ದೇಶ ಈಡೆರಿಂತಾಗುತ್ತದೆ.ಇಂದು ವಿವಿಧ ನಿಗಮದಿಂದ ಜನತೆಯ ಅಭಿವೃದ್ದ್ದಿಗೋಸ್ಕರ ಹಲವು ಯೋಜನೆಗಳಿವೆ ಇದನ್ನು ಸಾರ್ವಜನಿಕರು ಸದುಪಯೋಗ ಪಡಿಕೊಂಡು ಧನಾತ್ಮಕ ಬದಲಾವಣೆ ತಂದರೆ ಯೋಫಜನೆಯ ಉದ್ದೇಶ ಈಡೇರುತ್ತದೆ ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು.
ಅವರು ಸುಳ್ಯ ತಾಲೂಕಿನ ನಿಂತಿಕಲ್ ನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃಧ್ದಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಪಂಪ್ಸೆಟ್ ವಿತರಣೆ ಮಾಡಿ ಮಾತನಾಡಿದರು.
ಜಿ.ಪಂ.ಸದಸ್ಯೆ ಪುಷ್ಪಾವತಿ ಗೌಡ ಕಳುವಾಜೆ ,ಪುತ್ತೂರು ತಾ.ಪಂ.ಉಪಾಧ್ಯಕ್ಷ ದಿನೇಶ್ ಮೆದು ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಭಿವೃದ್ದಿ ಅಧಿಕಾರಿ ಶಿವರಾಮ್,ಬಾಳಿಲ ಗ್ರಾ.ಪಂ.ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ,ಸವಣೂರು ಗ್ರಾ.ಪಂ.ಸದಸ್ಯರಾದ ಪ್ರಕಾಶ್ ಕುದ್ಮನಮಜಲು ,ಸತೀಶ್ ಬಲ್ಯಾಯ ಕೆ ಉಪಸ್ಥಿತರಿದ್ದರು. ಸುಳ್ಯ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಸ್ವಾಗತಿಸಿ,ವಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.