ಕಾಬೂಲ್: ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ನಂತರ 6,400 ಕ್ಕೂ ಹೆಚ್ಚು ಪತ್ರಕರ್ತರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪತ್ರಕರ್ತರ ಮೇಲೆ ತಾಲಿಬಾನ್ನಿಂದ ಹೆಚ್ಚುತ್ತಿರುವ ದಬ್ಬಾಳಿಕೆಯ ವರದಿಗಳು ಅಫ್ಘಾನಿಸ್ತಾನದಿಂದ ನಿರಂತರವಾಗಿ ಹೊರಹೊಮ್ಮುತ್ತಿವೆ.
ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (RSF) ಮತ್ತು ಅಫ್ಘಾನ್ ಸ್ವತಂತ್ರ ಪತ್ರಕರ್ತರ ಸಂಘ (AIJA) ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ನಂತರ ಆಫ್ಘನ್ ಮಾಧ್ಯಮದ ಚಿತ್ರಣವೇ ಬದಲಾವಣೆಯನ್ನು ತೋರಿಸುತ್ತಿದೆ. 231 ಮಾಧ್ಯಮಗಳನ್ನು ಮುಚ್ಚಬೇಕಾಗಿದೆ ಎಂದು ಸಮೀಕ್ಷೆ ಹೇಳಿದೆ.
ಸಮೀಕ್ಷೆಯ ಪ್ರಕಾರ, ಪ್ರತಿ ಹತ್ತರಲ್ಲಿ ನಾಲ್ಕಕ್ಕೂ ಹೆಚ್ಚು ಮಾಧ್ಯಮಗಳು ಕಣ್ಮರೆಯಾಗಿವೆ ಮತ್ತು 60 ಪ್ರತಿಶತ ಪತ್ರಕರ್ತರು ಮತ್ತು ಮಾಧ್ಯಮ ಉದ್ಯೋಗಿಗಳು ಇನ್ನು ಮುಂದೆ ಕೆಲಸ ಮಾಡಲು ಸಾಧ್ಯಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲಿಬಾನ್ ಕಾಬೂಲ್ ಅನ್ನು ವಶಪಡಿಸಿಕೊಂಡ ನಂತರ ಪತ್ರಕರ್ತರಲ್ಲಿ ಶೇಕಡಾ 80 ರಷ್ಟು ಉದ್ಯೋಗ ಕಳೆದುಕೊಂಡಿದ್ದಾರೆ. ಮಹಿಳಾ ಪತ್ರಕರ್ತರು ಹೆಚ್ಚಾಗಿ ಪ್ರಭಾವಿತರಾಗಿದ್ದಾರೆ ಎಂದು ಸಮೀಕ್ಷೆಯು ಬಹಿರಂಗಪಡಿಸಿದೆ.
2021 ರ ಬೇಸಿಗೆಯ ಆರಂಭದಲ್ಲಿ ಅಫ್ಘಾನಿಸ್ತಾನದಲ್ಲಿ ಒಟ್ಟು 543 ಮಾಧ್ಯಮಗಳ ಪೈಕಿ 312 ಮಾತ್ರ ನವೆಂಬರ್ ಅಂತ್ಯದಲ್ಲಿ ಕಾರ್ಯನಿರ್ವಹಿಸಿವೆ ಎಂದು RSF ಹೇಳಿಕೆಯಲ್ಲಿ ತಿಳಿಸಿದೆ. ಅಂದರೆ ಮೂರು ತಿಂಗಳ ಅಂತರದಲ್ಲಿ ಶೇಕಡ 43ರಷ್ಟು ಆಫ್ಘನ್ ಮಾಧ್ಯಮಗಳು ಕಣ್ಮರೆಯಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.