ನವದೆಹಲಿ: 2014 ರಿಂದ 2020 ರ ಅವಧಿಯಲ್ಲಿ ಆಯುಷ್ನ ಮಾರುಕಟ್ಟೆ ಗಾತ್ರವು 17 ಪ್ರತಿಶತದಷ್ಟು ಬೆಳೆದು 18.1 ಬಿಲಿಯನ್ ಡಾಲರ್ಗೆ ತಲುಪಿದೆ ಎಂದು ಸರ್ಕಾರ ಹೇಳಿದೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಸಂಶೋಧನೆ ಮತ್ತು ಮಾಹಿತಿ ವ್ಯವಸ್ಥೆ (RIS) ವರದಿಯ ಪ್ರಕಾರ, ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ 2020 ರಲ್ಲಿ ಆರ್ಥಿಕ ಚಟುವಟಿಕೆಯಲ್ಲಿ ಕುಸಿತದ ಹೊರತಾಗಿಯೂ, ಆಯುಷ್ ಉದ್ಯಮವು 2021 ರಲ್ಲಿ 20.6 ಬಿಲಿಯನ್ ಡಾಲರ್ ಮತ್ತು 2022 ರಲ್ಲಿ 23.3 ಬಿಲಿಯನ್ ಡಾಲರ್ಗಳನ್ನು ತಲುಪುವ ನಿರೀಕ್ಷೆಯಿದೆ.
ಸಾಂಪ್ರದಾಯಿಕ ಭಾರತೀಯ ಔಷಧ ಪದ್ಧತಿಯನ್ನು ಪುನರುಜ್ಜೀವನಗೊಳಿಸಲು ಮತ್ತು ಉತ್ತೇಜಿಸಲು ನಿರ್ಧರಿಸಲಾಗಿದೆ ಎಂದು ಆಯುಷ್ ಸಚಿವಾಲಯ ತಿಳಿಸಿದೆ.
ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಆಡಳಿತಕ್ಕೆ ಬಂದ ಬಳಿಕ ಆಯುರ್ವೇದವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಂಡಿರುವುದು ಆಯುಷ್ ಮಾರುಕಟ್ಟೆಯ ಬೆಳವಣಿಗೆಗೆ ಕಾರಣವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.