ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವಾರು ನಿರ್ಬಂಧಗಳನ್ನು ಹೇರಲಾಗಿದೆ. ರಾಜ್ಯಾದ್ಯಂತ ಎರಡು ವಾರಗಳ ಕಾಲ ಸೆಮಿ ಲಾಕ್ಡೌನ್ ವಿಧಿಸಲು ನಿರ್ಧರಿಸಲಾಗಿದೆ. ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಮುಂದುವರೆಸಲಾಗಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತಮಟ್ಟದ ಸಭೆ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದ ಎಲ್ಲಾ ಆಫ್ಲೈನ್ ತರಗತಿ ಮುಚ್ಚಲು ತೀರ್ಮಾನ ತೆಗೆದುಕೊಳ್ಳಲಾಗಿದೆ, ನಾಳೆ ರಾತ್ರಿ 10 ಗಂಟೆಗೆ ಹೊಸ ಕೊರೋನಾ ನಿಯಮ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ಉಳಿದ ಜಿಲ್ಲೆಗಳಲ್ಲಿ ಶಾಲೆಗಳು ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಹೇಳಲಾಗಿದೆ.
ಶುಕ್ರವಾರ ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.
ಚಿತ್ರಮಂದಿರ, ಪಬ್, ರೆಸ್ಟೋರೆಂಟ್, ಮಾಲ್ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಶೇಕಡ 50ರಷ್ಟು ಮಂದಿಗೆ ಸೀಮಿತಗೊಳಿಸಿ ನಿರ್ಬಂಧ ವಿಧಿಸಲಾಗಿದೆ. ಈ ಮೇಲಿನ ಸ್ಥಳಗಳಿಗೆ ಭೇಟಿ ನೀಡುವವರಿಗೆ ಕಡ್ಡಾಯವಾಗಿ ಎರಡು ಡೋಸ್ ವ್ಯಾಕ್ಸಿನ್ ಪಡೆದಿರಬೇಕು. ಮದುವೆ ಸಮಾರಂಭ ಹೊರಾಂಗಣದಲ್ಲಿ ಇದ್ದರೆ 200 ಜನ, ಒಳಾಂಗಣದಲ್ಲಿದ್ದರೆ ನೂರು ಜನರಿಗೆ ಮಾತ್ರ ಅವಕಾಶ. ಜೊತೆಗೆ ಇಲ್ಲಿಯೂ ಕೂಡ 2 ಡೋಸ್ ಲಸಿಕೆ ಕಡ್ಡಾಯಗೊಳಿಸಲಾಗಿದೆ.
ಮಹಾರಾಷ್ಟ್ರ, ಕೇರಳ, ಗೋವಾದಿಂದ ಬರುವವರೆಗೆ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ, ವಿದೇಶಿ ಪ್ರಯಾಣಿಕರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸರಿಸಲು ತೀರ್ಮಾನಿಸಲಾಗಿದೆ. ಎಲ್ಲಾ ಪ್ರಯಾಣಿಕರ ಟ್ರ್ಯಾಕಿಂಗ್, ಟ್ರೇಸಿಂಗ್ ಬಲಪಡಿಸಲು ತೀರ್ಮಾನಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.