ನವದೆಹಲಿ: ಅಟಲ್ ಪಿಂಚಣಿ ಯೋಜನೆಯ ಚಂದಾದಾರರ ಸಂಖ್ಯೆ ಇದುವರೆಗೆ 3.68 ಕೋಟಿ ತಲುಪಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ವಿಶೇಷವಾಗಿ ಅಸಂಘಟಿತ ವಲಯದ ನಾಗರಿಕರಿಗೆ ವೃದ್ಧಾಪ್ಯ ಆದಾಯ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು 2015 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದರು.
ಪ್ರಸಕ್ತ ಹಣಕಾಸು ವರ್ಷದಲ್ಲಿ ಇದುವರೆಗೆ 65 ಲಕ್ಷಕ್ಕೂ ಹೆಚ್ಚು ಮಂದಿ ಅಟಲ್ ಪಿಂಚಣಿ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ಅಲ್ಲದೇ ಯಜನೆಯ ಪುರುಷ ಮಹಿಳೆ ಅನುಪಾತವು 56:44 ಆಗಿದ್ದು ಸುಧಾರಿಸುತ್ತಿದೆ ಮತ್ತು ಯೋಜನೆ ಅಡಿಯಲ್ಲಿ ಸಂಗ್ರಹವಾ ಮೊತ್ತ ಸುಮಾರು 20 ಸಾವಿರ ಕೋಟಿ ರೂಪಾಯಿಯಾಗಿದೆ.
ಬ್ಯಾಂಕ್ ಖಾತೆಯನ್ನು ಹೊಂದಿರುವ 18 ರಿಂದ 40 ವರ್ಷ ವಯಸ್ಸಿನ ಯಾವುದೇ ಭಾರತೀಯ ನಾಗರಿಕರು ಅಟಲ್ ಪಿಂಚಣಿ ಯೋಜನೆಗೆ ಚಂದಾದಾರರಾಗಬಹುದು ಎಂದು ಸಚಿವಾಲಯ ಹೇಳಿದೆ.
ಅಟಲ್ ಪಿಂಚಣಿ ಯೋಜನೆಯನ್ನು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್ಪಿಎಸ್) ಅಡಿಯಲ್ಲಿ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಅಥವಾ ಪಿಎಫ್ಆರ್ಡಿಎ ನಿರ್ವಹಿಸುತ್ತದೆ. ಅಟಲ್ ಪಿಂಚಣಿ ಯೋಜನೆಯಡಿ, ಚಂದಾದಾರರು 60 ವರ್ಷ ದಾಟಿದ ನಂತರ ನಿಗದಿತ ಪಿಂಚಣಿ ಮೊತ್ತವನ್ನು ಪಡೆಯುತ್ತಾರೆ. ವೃದ್ಧಾಪ್ಯದಲ್ಲಿ ಅವರಿಗೆ ಸಹಾಯಕವಾಗುವಂತಹ ಪಿಂಚಣಿ ಯೋಜನೆಯನ್ನು ಆಯ್ಕೆ ಮಾಡಲು ಇದು ಜನರನ್ನು ಪ್ರೋತ್ಸಾಹಿಸುತ್ತದೆ. ಈ ಯೋಜನೆಯಲ್ಲಿನ ಪಿಂಚಣಿ ಮೊತ್ತವು ವ್ಯಕ್ತಿಯ ಚಂದಾದಾರಿಕೆಯನ್ನು ಆಧರಿಸಿ 1,000 ರಿಂದ 5,000 ರೂ ಆಗಿರುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.