ನವದೆಹಲಿ: ಭಾರತದ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಮತ್ತು ಇಂಡೋನೇಷ್ಯಾದ ವಿದೇಶಾಂಗ ಸಚಿವ ರೆಟ್ನೋ ಮರ್ಸೂಡಿ ಹೊಸ ವರ್ಷದ ನಿಮಿತ್ತ ಸಂವಾದ ನಡೆಸಿದ್ದು, ಇದರಲ್ಲಿ ಅಚೆ ಮತ್ತು ಅಂಡಮಾನ್ ನಿಕೋಬಾರ್ ದ್ವೀಪ ಸಂಪರ್ಕ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿಯವರ 2018 ರ ಇಂಡೋನೇಷ್ಯಾ ಭೇಟಿಯ ಸಂದರ್ಭದಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಮತ್ತು ಇಂಡೋನೇಷ್ಯಾದ ಅಚೆ ಪ್ರಾಂತ್ಯದ ನಡುವಿನ ಸಂಪರ್ಕದಲ್ಲಿ ಸಹಕರಿಸಲು ಎರಡೂ ಕಡೆಯವರು ನಿರ್ಧರಿಸಿದ್ದರು.
ಸಂವಾದದ ಸಮಯದಲ್ಲಿ, ಎರಡೂ ಕಡೆಯವರು ಕೋವಿಡ್ ಬಿಕ್ಕಟ್ಟು, ಮ್ಯಾನ್ಮಾರ್ ಮತ್ತು ಅಫ್ಘಾನಿಸ್ತಾನದ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು. ಆಸಿಯಾನ್ ಸದಸ್ಯರಾಗಿ ಇಂಡೋನೇಷ್ಯಾವು ಭಾರತದಂತೆ ಮ್ಯಾನ್ಮಾರ್ನಲ್ಲಿನ ಬೆಳವಣಿಗೆಗಳ ಬಗ್ಗೆ ಕಾಳಜಿ ವಹಿಸಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.