ನವದೆಹಲಿ: ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜನವರಿ 12 ರ ಬುಧವಾರ 25 ನೇ ರಾಷ್ಟ್ರೀಯ ಯುವ ಉತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ.
“ಜನವರಿ 12ರಂದು 25ನೇ ರಾಷ್ಟ್ರೀಯ ಯುವಜನೋತ್ಸವದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪಾಲ್ಗೊಳ್ಳಲಿದ್ದೇನೆ. ಕಾರ್ಯಕ್ರಮಕ್ಕೆ ಸೇರಲು ನನ್ನ ಯುವ ಸ್ನೇಹಿತರನ್ನು ಕೇಳುವುದರ ಜೊತೆಗೆ, ಅವರ ಸಲಹೆಗಳನ್ನು ಹಂಚಿಕೊಳ್ಳಲು ನಾನು ಅವರನ್ನು ಒತ್ತಾಯಿಸುತ್ತೇನೆ. ಭಾರತದ ಪ್ರತಿಭಾವಂತ ಯುವಕರಿಂದ ಸಲಹೆ ಕೇಳಲು ಯಾವಾಗಲೂ ಸಂತೋಷವಾಗುತ್ತದೆ” ಎಂದು ಮೋದಿ ಟ್ವಿಟ್ ಮಾಡಿದ್ದಾರೆ.
ಟ್ವೀಟ್ನಲ್ಲಿ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ಈ ಭವ್ಯ ಸಮಾರಂಭದಲ್ಲಿ ಭಾಗವಹಿಸಲು ನೋಂದಾಯಿಸಿಕೊಳ್ಳುವಂತೆ ಜನರನ್ನು ಒತ್ತಾಯಿಸಿದ್ದಾರೆ. ಜನರು pmevents.ncog.gov.in ವೆಬ್ಸೈಟ್ನಲ್ಲಿ ನೋಂದಾಯಿಸಿಕೊಳ್ಳಬಹುದು. ಈ ಕಾರ್ಯಕ್ರಮಕ್ಕೆ ಈಗಾಗಲೇ 20 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಿದ್ದಾರೆ.
ರಾಷ್ಟ್ರ ನಿರ್ಮಾಣದ ಕಡೆಗೆ ಯುವ ನಾಗರಿಕರನ್ನು ಹುರಿದುಂಬಿಸಲು, ಒಂದುಗೂಡಿಸಲು ಮತ್ತು ಸಕ್ರಿಯಗೊಳಿಸುವ ಗುರಿಯನ್ನು ಯು ಉತ್ಸವ ಹೊಂದಿದೆ. ಜನವರಿ 13 ರಂದು ರಾಷ್ಟ್ರೀಯ ಯುವ ಶೃಂಗಸಭೆಯನ್ನು ಆಯೋಜಿಸಲಾಗುತ್ತಿದ್ದು, ಇದು ಭಾರತದ ವೈವಿಧ್ಯಮಯ ಸಂಸ್ಕೃತಿಗಳನ್ನು ಪ್ರಚಾರಪಡಿಸಲು ಮತ್ತು ಅವುಗಳನ್ನು ಏಕ ಭಾರತ, ಶ್ರೇಷ್ಠ ಭಾರತ್ಗೆ ಸಂಯೋಜಿಸುವ ಗುರಿಯನ್ನು ಹೊಂದಿದೆ.
On the 12th, I would be taking part in the 25th National Youth Festival via video conferencing. Apart from asking my young friends to join the programme, I also urge them to share their inputs as well. Always a delight to hear from India’s talented youth. https://t.co/nSmRPSzfvW
— Narendra Modi (@narendramodi) January 10, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.