ಬೆಂಗಳೂರು: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಯನ್ನು ಈ ವರ್ಷ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸರ್ಕಾರ ನಿರ್ಧರಿಸಿದೆ.
ಜನವರಿ 23ರಂದು ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದ್ದಾರೆ.
ನೇತಾಜಿ ಅವರ ಜೀವನ, ಅವರ ಸಾಧನೆ ಮತ್ತು ತ್ಯಾಗ ಯುವಜನರಿಗೆ ಸ್ಫೂರ್ತಿದಾಯಕವಾಗಿದೆ. ಹೀಗಾಗಿ ಕರ್ನಾಟಕದ ಎಲ್ಲಾ ಶಾಲೆ ಮತ್ತು ಕಾಲೇಜುಗಳಲ್ಲಿ ವರ್ಷವಿಡಿ ಅವರ ಕುರಿತ ಕಾರ್ಯಕ್ರಮಗಳನ್ನು ಆಚರಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ವಿಶೇಷವಾದ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.
ಜನವರಿ 23 ರಂದು ಬೆಂಗಳೂರಿನ ಜಕ್ಕೂರಿನ ವೈಮಾನಿಕ ತರಬೇತಿ ಶಾಲೆಯಲ್ಲಿ ನೇತಾಜಿ ಅವರ ಜನ್ಮದಿನಾಚರಣೆಯನ್ನು ಆಚರಿಸಲು ಸರ್ಕಾರ ನಿರ್ಧರಿಸಿದೆ. ಕಾರ್ಯಕ್ರಮದಲ್ಲಿ 100 ಎನ್ಸಿಸಿ ಕೆಡೆಟ್, ಕಮಾಂಡರ್ ಗಳು ಭಾಗಿಯಾಗಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.