ಬೆಂಗಳೂರು: ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ನಮ್ಮ ರಾಜ್ಯದ ‘ಕರ್ನಾಟಕ: ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು’ ವಿಷಯದ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. ದಕ್ಷಿಣ ಭಾರತದ 12 ಸ್ತಬ್ಧಚಿತ್ರಗಳಲ್ಲಿ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರವಿದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಡಾ.ಪಿ.ಎಸ್.ಹರ್ಷ ಮಾಹಿತಿ ನೀಡಿದ್ದಾರೆ.
ಕರ್ನಾಟಕವು ಸತತ 13 ನೇ ವರ್ಷ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಆಯ್ಕೆಯಾಗಿದೆ. ರಾಷ್ಟ್ರ ರಾಜಧಾನಿಯ ಗಣರಾಜ್ಯೋತ್ಸವದಲ್ಲಿ ಕರ್ನಾಟಕ ಪಾಲ್ಗೊಳ್ಳಲು ಆರಂಭಿಸಿದ್ದು 1972 ರಲ್ಲಿ. ಸ್ವಾತಂತ್ರ್ಯದ ಅಮೃತಮಹೋತ್ಸವ ಆಚರಣೆಯಾಗುತ್ತಿರುವ ಸಂದರ್ಭದಲ್ಲಿ, ಕರ್ನಾಟಕದ ಈ ಪಾಲ್ಗೊಳ್ಳುವಿಕೆಯು ಸುವರ್ಣ ವರ್ಷ (50) ಪೂರೈಸುತ್ತಿದೆ ಎಂಬುದು ಹೆಮ್ಮೆಯ ಸಂಗತಿ.
ಕಲಾ ನಿರ್ದೇಶಕ ಶಶಿಧರ್ ಅಡಪ ನೇತೃತ್ವದ ಪ್ರತಿರೂಪಿ ಸಂಸ್ಥೆಯ ನೂರಕ್ಕೂ ಹೆಚ್ಚು ಕಲಾವಿದರು, ಸಂಗೀತ ನಿರ್ದೇಶಕ ಪ್ರವೀಣ್ ದಯಾನಂದ ರಾವ್ ತಂಡ, ಜಾನಪದ ತಜ್ಞ ಡಾ.ರಾಧಾಕೃಷ್ಣ ಉರಾಳ ನೇತೃತ್ವದ ಕಲಾ ಕದಂಬ ತಂಡ ಇದಕ್ಕಾಗಿ ಶ್ರಮಿಸುತ್ತಿದೆ.
ಸ್ತಬ್ಧಚಿತ್ರದ ಮುಂಭಾಗ, ಬೀಟೆ, ದಂತದ ಕಸೂತಿ ಕೆತ್ತನೆಯ ಆನೆ, ಕೆಳಭಾಗ ಯಕ್ಷಗಾನದ ಚಿತ್ರಣ, ಗಂಜೀಫಾ ಕಲಾಕೃತಿ ಹೊಂದಲಿದೆ. ಮಧ್ಯಭಾಗದಲ್ಲಿ, ಬಿದರಿ ಕಲೆಯಿಂದ ರೂಪಿಸಿದ ಹೂಜಿ, ಭೂತಾರಾಧನೆಯ ಕಲಾಕೃತಿ ಇರಲಿದೆ. ಕೊನೆಯಲ್ಲಿ ಕರಕುಶಲ ಉತ್ಪನ್ನಗಳನ್ನು ಪ್ರೋತ್ಸಾಹಿಸಿದ ಕನ್ನಡತಿ, ಹೋರಾಟಗಾರ್ತಿ, ಕಮಲಾದೇವಿ ಚಟ್ಟೋಪಾಧ್ಯಾಯ ಅವರ ಕಲಾಕೃತಿ ಇರಲಿದೆ.
ನವದೆಹಲಿಯಲ್ಲಿ #RepublicDay ನಲ್ಲಿ ರಾಜ್ಯದಿಂದ 'ಕರ್ನಾಟಕ: ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು' ವಿಷಯದ ಸ್ತಬ್ಧಚಿತ್ರ ಪ್ರದರ್ಶನವಾಗಲಿದೆ. ದಕ್ಷಿಣ ಭಾರತದ 12 ಸ್ತಬ್ಧಚಿತ್ರಗಳಲ್ಲಿ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರವಿದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ. (1/4) pic.twitter.com/yw8UUK6R22
— DIPR Karnataka (@KarnatakaVarthe) January 22, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.