ಬೆಳ್ತಂಗಡಿ : ಧರ್ಮದ ಉಳಿವಿನಲ್ಲಿ ನಮ್ಮ ಉಳಿವಿದೆ. ಧರ್ಮವನ್ನು ರಕ್ಷಿಸಿದರೆ ನಮ್ಮನ್ನು ನಾವು ರಕ್ಷಿಸಿಕೊಂಡಂತೆ. ಧರ್ಮ ಜಾಗೃತಿ ನಮ್ಮ ಮನೆಯಿಂದ ಆರಂಭವಾಗಬೇಕು. ಆಗ ಮಾತ್ರ ಸನಾತನ ಹಿಂದೂ ಧರ್ಮದ ಉಳಿವು ಸಾಧ್ಯ ಎಂದು ಕನ್ಯಾಡಿ ಶ್ರೀರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನುಡಿದರು. ಅವರು ಭಾನುವಾರ ಸಂಜೆ ನಾಳ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹಿಂದೂ ಜಾಗೃತಿ ಸಮಿತಿ ಕಳಿಯ-ನ್ಯಾಯತರ್ಪು ಇದರ ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಮಹಿಳೆಯರು ಮುಖ್ಯವಾಗಿ ತಮ್ಮ ಮಕ್ಕಳಲ್ಲಿ ನಮ್ಮ ಧರ್ಮದ ಜಾಗೃತಿಯನ್ನು ಮೂಡಿಸಬೇಕಾಗಿದೆ. ಸಣ್ಣ ಮಕ್ಕಳಿಗೆ ನಮ್ಮ ಧರ್ಮ, ಸಂಸ್ಕಾರವನ್ನು ಹೇಳಿಕೊಉವ ಕೆಲಸವನ್ನು ಮಡಿದರೆ ಭವ್ಯ ಹಿಂದೂ ಸಮಾಜದ ನಿರ್ಮಾಣ ಸಾಧ್ಯ ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಾಳ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ಮಜಲು, ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಾವೆಲ್ಲ ಹಿಂದುಗಳು ಎಂಬ ದೃಷ್ಠಿಯಲ್ಲಿ ಭಾಗವಹಿಸಬೇಕು ಎಂದರು.ವೇದಮೂರ್ತಿ ರಾಮಕೃಷ್ಣ ಭಾಂಗಿಣ್ಣಾಯ ಕುಂಠಿನಿ ಹಿಂದೂ ಜಾಗೃತಿ ಸಮಿತಿಯನ್ನು ಉದ್ಘಾಟಿಸಿದರು.
ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಆಸ್ರಣ್ಣ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಆನಂದ ಶೆಟ್ಟಿ ಐಸಿರಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಜನಾರ್ದನ ಪೂಜಾರಿ ಉಪಸ್ಥಿತರಿದ್ದರು.ಸಮಿತಿಯ ಪ್ರಧಾನ ಸಂಚಾಲಕ ರಾಘವ ಎಚ್. ಸ್ವಾಗತಿಸಿ, ಪ್ರಸ್ತಾಪಿಸಿದರು. ಕೋಶಾಧಿಕಾರಿ ರಾಜೇಶ್ ಪೆಂರ್ಬುಡ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.