ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಪರಿಸ್ಥಿತಿ ಭಯಾನಕವಾಗಿದೆ ಎಂದು ಅಲ್ಲಿನ ಗವರ್ನರ್ ಜಗದೀಪ್ ಧಂಖರ್ ಹೇಳಿದ್ದಾರೆ. ರಾಜ್ಯದ ಜನತೆಗೆ ತಮ್ಮ ಹಕ್ಕುಗಳನ್ನು ಮುಕ್ತವಾಗಿ ಮತ್ತು ನಿರ್ಭಯವಾಗಿ ಚಲಾಯಿಸುವ ಸ್ವಾತಂತ್ರ್ಯವಿಲ್ಲ ಎಂದು ಆರೋಪಿಸಿದ್ದಾರೆ.
ರಾಜ್ಯ ಅಸೆಂಬ್ಲಿ ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರು ಸಾಂವಿಧಾನಿಕ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಅವರು ಆರೋಪಿಸಿದ್ದು, ಆಡಳಿತಾರೂಢ ಟಿಎಂಸಿ ಧೋರಣೆಗಳ ವಿರುದ್ಧ ಹರಿಹಾಯ್ದಿದ್ದಾರೆ.
‘ಚುನಾವಣೆಯ ನಂತರದ ಹಿಂಸಾಚಾರವನ್ನು ನಾವು ನೋಡಿದ್ದೇವೆ. ಸ್ವ ಇಚ್ಛೆಯಂತೆ ಮತ ಚಲಾಯಿಸಿದವರು ತಮ್ಮ ಪ್ರಾಣದ ಬೆಲೆ ತೆರಬೇಕಾಯಿತು’ ಎಂದು ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಬಿ ಆರ್ ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಧಂಖರ್ ಹೇಳಿದ್ದಾರೆ.
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ನೇಮಿಸಿದ ಸತ್ಯಶೋಧನಾ ಸಮಿತಿಯು ರಾಜ್ಯದಲ್ಲಿ ಆಡಳಿತ ನಡೆಸುವವರೇ ಕಾನೂನಾಗಿದ್ದಾರೆ. ಅವರು ಹೇಳಿದ್ದೇ ಕಾನೂನಾಗಿದೆ ಎಂದಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿವಿಧ ಸಂದರ್ಭಗಳಲ್ಲಿ ತಮ್ಮ ಪ್ರಶ್ನೆಗಳಿಗೆ ಉತ್ತರವನ್ನು ನೀಡಲು ವಿಫಲರಾಗಿದ್ದಾರೆ ಎಂದು ರಾಜ್ಯಪಾಲರು ಆರೋಪಿಸಿದ್ದಾರೆ.
ವಿಧಾನಸಭೆಯಲ್ಲಿ ನಾನು ಮಾಡಿದ ಭಾಷಣವನ್ನು ಎರಡು ಬಾರಿ ಬ್ಲ್ಯಾಕ್ ಔಟ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.