Tuesday, September 1st, 2015
News13
ಕುಂಬಳೆ : “ಸಹೋದರ ಪ್ರೇಮದ ಸಂಕೇತವಾಗಿ ರಕ್ಷಾ ಬಂಧನವನ್ನು ಆಚರಿಸಲಾಗುತ್ತದೆ. ಅಣ್ಣನಿಗೆ ರಕ್ಷೆಯನ್ನು ಕಟ್ಟುವ ಮೂಲಕ ಸಹೋದರಿ ತನ್ನ ಬಾಳು ಚೆನ್ನಾಗಿರುವಂತೆ ಅಭಯವನ್ನು ಪಡೆದುಕೊಳ್ಳುತ್ತಾಳೆ.
ಆಧುನಿಕ ಜಗತ್ತಿನ ಸುಖ ಸೌಕರ್ಯಗಳ ಎಡೆಯಲ್ಲಿ ಈ ರೀತಿಯ ಹಬ್ಬಗಳನ್ನು ಆಚರಿಸುವುದು ನೈತಿಕ ಮೌಲ್ಯದ ಉಳಿವಿಗೆ ಸಹಾಯಕವಾಗುತ್ತದೆ ಎಂದು ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ಜತೆ ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ ಅಭಿಪ್ರಾಯಪಟ್ಟರು. ಅವರು ಸೋಮವಾರ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ನಡೆದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆಮಾರ್ಗ, ಶಾಲಾ ಮುಖ್ಯೋಪಾಧ್ಯಾಯಿನಿ ಚಿತ್ರಾ ಸರಸ್ವತಿ ಪೆರಡಾನ, ಶಿಕ್ಷಕಿಯರಾದ ಕಾವೇರಿ ಮತ್ತು ಶಿವಕುಮಾರಿ ಉಪಸ್ಥಿತರಿದ್ದರು. ದೀಕ್ಷಾ. ಎಸ್ ಕಾರ್ಯಕ್ರಮ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.