ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದ್ದು ಇದು ಆತಂಕ ಸೃಷ್ಟಿ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಪರಿಸ್ಥಿತಿಯ ಬಗ್ಗೆ ದೂರವಾಣಿ ಕರೆ ಮಾಡಿ ವಿಚಾರಿಸಿದ್ದಾರೆ.
“ಶನಿವಾರ ಜಮ್ಮು ಮತ್ತು ಕಾಶ್ಮೀರದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದೆ ಆದರೆ ಯಾವುದೇ ಜೀವಹಾನಿ ಅಥವಾ ಆಸ್ತಿ ಹಾನಿಯ ವರದಿಯಾಗಿಲ್ಲ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗ್ಗೆ 9.45ಕ್ಕೆ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ಥಾನ-ತಜಕಿಸ್ಥಾನ ಗಡಿಯಲ್ಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಬಲ ಕಂಪನದ ಅನುಭವವಾಗಿದೆ ಎಂದು ಹೇಳಲಾಗಿದೆ.
181 ಕಿಮೀ ಆಳದಲ್ಲಿ 36.34 ಡಿಗ್ರಿ ಉತ್ತರ ಮತ್ತು ರೇಖಾಂಶ 71.05 ಡಿಗ್ರಿ ಪೂರ್ವದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಂಪನದಿಂದಾಗಿ ಮನೆಯಿಂದ ಹೊರಗೆ ಧಾವಿಸಿ ಜನರು ಆತಂಕ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಮೂಲಗಳ ಪ್ರಕಾರ, ಕಂಪನದ ನಂತರ ಕೇಂದ್ರಾಡಳಿತ ಪ್ರದೇಶದ ಪರಿಸ್ಥಿತಿಯನ್ನು ತಿಳಿಯಲು ಪಿಎಂ ಮೋದಿ ಸಿನ್ಹಾ ಅವರಿಗೆ ಕರೆ ಮಾಡಿದ್ದಾರೆ.
PM Narendra Modi called J&K Lt Governor Manoj Sinha to inquire about the situation in the UT due to the earthquake: Sources
(File photo) pic.twitter.com/oKBjE2SJAC
— ANI (@ANI) February 5, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.