ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಐದನೇ ಹಂತದ ಅಡಿಯಲ್ಲಿ ಇದುವರೆಗೆ ಸುಮಾರು 50.38 ಲಕ್ಷ ಮೆಟ್ರಿಕ್ ಟನ್ ಆಹಾರಧಾನ್ಯಗಳನ್ನು ವಿತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ.
ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ, “ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಲಭ್ಯವಾದ ವರದಿಗಳ ಪ್ರಕಾರ, 31 ಜನವರಿ 2022 ರವರೆಗೆ ಸುಮಾರು 50.38 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯಗಳನ್ನು 5 ನೇ ಹಂತದಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PM-GKAY) ಅಡಿಯಲ್ಲಿ ವಿತರಿಸಲಾಗಿದೆ” ಎಂದಿದೆ.
ಪಿಎಂ-ಜಿಕೆಎವೈ ಅಡಿಯಲ್ಲಿ ದೇಶದಲ್ಲಿ ಸುಮಾರು 80 ಕೋಟಿ ಫಲಾನುಭವಿಗಳು ತಮ್ಮ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (NFSA) ಅಡಿಯಲ್ಲಿನ ಮಾಸಿಕ NFSA ಆಹಾರಧಾನ್ಯಗಳಿಗಿಂತ ಪ್ರತಿ ತಿಂಗಳಿಗೆ 5 ಕೆಜಿಯಷ್ಟು ಹೆಚ್ಚುವರಿ ಉಚಿತ ಆಹಾರ ಧಾನ್ಯಗಳನ್ನು ಪಡೆಯಲು ಅರ್ಹರಾಗಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಪಿಎಂ-ಜಿಕೆಎವೈ ಹಂತ 1 ರಿಂದ 5 ರ ಅನುಷ್ಠಾನಕ್ಕಾಗಿ ಕೋವಿಡ್ -19 ಸಾಂಕ್ರಾಮಿಕ ರೋಗ ಹರಡಿದ ನಂತರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 759 ಲಕ್ಷ ಮೆಟ್ರಿಕ್ ಟನ್ ಆಹಾರಧಾನ್ಯಗಳನ್ನು ಮಂಜೂರು ಮಾಡಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.