ಲಕ್ನೋ: ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ತನಗಿರುವ ಮುಸ್ಲಿಂ ಓಲೈಕೆಯ ಹಣೆಪಟ್ಟಿಯನ್ನು ಅಳಿಸಿ ಹಾಕಲು ಅಲ್ಲಿನ ಸಮಾಜವಾದಿ ಸರ್ಕಾರ ಪ್ರಯತ್ನಗಳನ್ನು ಆರಂಭಿಸಿದೆ.
ವೃಂದಾವನದಲ್ಲಿರುವ ಬಂಕೆ ಬಿಹಾರಿ ದೇಗುಲ ಮತ್ತು ಮಿರ್ಜಾಪುರದಲ್ಲಿರುವ ವಿದ್ಯಾಂಚಲ ದೇಗುಲಗಳನ್ನು ತನ್ನ ಸುಪರ್ದಿಗೆ ಪಡೆದುಕೊಂಡು ಅವುಗಳನ್ನು ಅಭಿವೃದ್ಧಿ ಪಡಿಸಲು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮುಂದಾಗಿದ್ದಾರೆ.
ಈ ದೇಗುಲಗಳ ಟ್ರಸ್ಟ್ನಿಂದ ಅಧಿಕಾರವನ್ನು ತನಗೆ ಶೀಘ್ರದಲ್ಲೇ ವರ್ಗಾಯಿಸಿಕೊಳ್ಳುವುದಾಗಿ ಸರ್ಕಾರ ಹೇಳಿದೆ.
ಈ ದೇಗುಲದಲ್ಲಿ ಭಕ್ತರಿಗೆ ಸೌಲಭ್ಯಗಳು ಇಲ್ಲ ಮತ್ತು ಇದರ ಜೀರ್ಣೋದ್ಧಾರದ ಅಗತ್ಯವಿದೆ ಎಂಬ ದೂರಗಳು ಬಂದ ಹಿನ್ನಲೆಯಲ್ಲಿ ಸರ್ಕಾರ ಈ ಕ್ರಮಕೈಗೊಂಡಿದೆ. ಚುನಾವಣೆಯ ಹಿನ್ನಲೆಯಲ್ಲಿ ಹಿಂದೂಗಳ ಮನಸ್ಸು ಗೆಲ್ಲುವ ಉದ್ದೇಶವೂ ಇದರ ಹಿಂದಿದೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.