ಅಲ್ಮೋರಾ: ಉತ್ತರಾಖಂಡದ ಅಭಿವೃದ್ಧಿಯು ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಫೆಬ್ರವರಿ 14 ರಂದು ಉತ್ತರಾಖಂಡದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಅವರು ಸಮಾವೇಶವನ್ನು ಉದ್ದೇಶಿಸಿ ಇಂದು ಮಾತನಾಡಿದರು.
ರಾಜ್ಯದ ಗಡಿ ಗ್ರಾಮಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಬಿಜೆಪಿಯ ಆದ್ಯತೆಯಾಗಿದ್ದು, ಪರ್ವತಮಾಲಾ ಮತ್ತು ವೈಬ್ರೆಂಟ್ ವಿಲೇಜ್ ಯೋಜನೆಯಿಂದ ಜನರಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು.
ಜಮ್ರಾಣಿ ಅಣೆಕಟ್ಟು ಯೋಜನೆ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಪ್ರಧಾನಿ ಘೋಷಿಸಿದರು.
ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಕುಮಾನ್ ಪ್ರದೇಶದಲ್ಲಿ ಮಾನಸಖಂಡ ಪ್ರವಾಸೋದ್ಯಮ ಸರ್ಕ್ಯೂಟ್ ಅನ್ನು ಆದ್ಯತೆಯ ಮೇಲೆ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಹೇಳಿದರು.
ಉತ್ತರಾಖಂಡ್ ಮತ್ತೊಮ್ಮೆ ‘ಡಬಲ್ ಇಂಜಿನ್’ ಸರ್ಕಾರಕ್ಕೆ ಮತ ಹಾಕುವ ಬಗ್ಗೆ ಮನಸ್ಸು ಮಾಡಿದೆ ಎಂಬುದನ್ನು ಭಾರಿ ಜನಸ್ತೋಮ ಸೂಚಿಸುತ್ತಿದೆ ಎಂದಿದ್ದಾರೆ
ರಾಜ್ಯದಲ್ಲಿ 70 ಸದಸ್ಯ ಬಲದ ವಿಧಾನಸಭೆಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.