ನವದೆಹಲಿ: ನಿನ್ನೆ ಉತ್ತರಪ್ರದೇಶ, ಉತ್ತರಾಖಂಡ ಮತ್ತು ಗೋವಾದಲ್ಲಿ ವಿಧಾನಸಭಾ ಚುನಾವಣೆ ಜರುಗಿತ್ತು. ಈ ಮೂರು ರಾಜ್ಯಗಳಲ್ಲಿ ಕ್ರಮವಾಗಿ 61%, 65% ಮತ್ತು 79% ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಉತ್ತರ ಪ್ರದೇಶದಲ್ಲಿ ಎರಡನೇ ಹಂತದ ಚುನಾವಣೆಗೆ ನಿನ್ನೆ ಶಾಂತಿಯುತವಾಗಿ ಮತದಾನ ಮುಕ್ತಾಯವಾಗಿದೆ. ರಾಜ್ಯದ ಒಂಬತ್ತು ಜಿಲ್ಲೆಗಳ 55 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಚುನಾವಣಾ ಆಯೋಗದ ಪ್ರಕಾರ ಈ ಹಂತದಲ್ಲಿ ಶೇಕಡಾ 61 ರಷ್ಟು ಮತದಾನವಾಗಿದೆ.
ನಿನ್ನೆ ಮತದಾನ ನಡೆದ ಜಿಲ್ಲೆಗಳೆಂದರೆ ಸಹರಾನ್ಪುರ, ಬಿಜ್ನೋರ್, ಅಮ್ರೋಹಾ, ಮೊರಾದಾಬಾದ್, ರಾಂಪುರ ಮತ್ತು ಬರೇಲಿ. ಉತ್ತರ ಪ್ರದೇಶದಲ್ಲಿ ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಕೆಲವು ವಿರಳ ಘಟನೆಗಳನ್ನು ಹೊರತುಪಡಿಸಿ ಮತದಾನ ಶಾಂತಿಯುತವಾಗಿತ್ತು. ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಲು ಬಂದಿದ್ದು ಪ್ರಜಾಪ್ರಭುತ್ವಕ್ಕೆ ಉತ್ತಮ ಸಂಕೇತವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಉತ್ತರಾಖಂಡದಲ್ಲಿ ನಿನ್ನೆ ನಡೆದ ವಿಧಾನಸಭಾ ಚುನಾವಣಾಯಲ್ಲಿ ಸುಮಾರು ಶೇ.65.1ರಷ್ಟು ಮತದಾನವಾಗಿದೆ. ರಾಜ್ಯಾದ್ಯಂತ 11,697 ಮತಗಟ್ಟೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಮುಖ್ಯ ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.
ಗೋವಾದಲ್ಲಿ ನಿನ್ನೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಶೇ.79 ರಷ್ಟು ಮತದಾನವಾಗಿದೆ. ಇದಕ್ಕಾಗಿ ಚುನಾವಣಾ ಆಯೋಗ ಗೋವಾ ಜನರನ್ನು ಅಭಿನಂದಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.