ನವದೆಹಲಿ: 2008ರ ಅಹಮದಾಬಾದ್ ಸರಣಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ನ ವಿಶೇಷ ನ್ಯಾಯಾಲಯವು 38 ಮಂದಿ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆಯನ್ನು ಘೋಷಣೆ ಮಾಡಿದೆ.
2008ರ ಜುಲೈ 26ರಂದು ಅಹಮದಾಬಾದಿನ ಹಲವು ಕಡೆ ಕೇವಲ 70 ನಿಮಿಷಗಳ ಅಂತರದಲ್ಲಿ 20 ಬಾಂಬ್ಗಳನ್ನು ಸ್ಫೋಟಗೊಳಿಸಿದ್ದ ಭಯೋತ್ಪಾದಕರು 56 ಜೀವಗಳನ್ನು ಬಲಿ ಪಡೆದಿದ್ದರು. 200ಕ್ಕೂ ಹೆಚ್ಚು ಮಂದಿ ಈ ದಾಳಿಯಲ್ಲಿ ಗಾಯಗೊಂಡಿದ್ದರು.
2002ರ ಗೋಧ್ರಾ ಗಲಭೆಗೆ ಪ್ರತೀಕಾರವಾಗಿ ಇಂಡಿಯನ್ ಮುಜಾಹಿದ್ದೀನ್ ಭಯೋತ್ಪಾದಕರು ಈ ಸ್ಫೋಟಗಳನ್ನು ನಡೆಸಿದ್ದಾರೆ ಎಂದು ಪೊಲೀಸ್ ತನಿಖೆಯಿಂದ ತಿಳಿದು ಬಂದಿತ್ತು
ಪ್ರಕರಣದಲ್ಲಿ ಉಳಿದ 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಭಾರತೀಯ ನೀತಿ ಸಂಹಿತೆ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆಯ ಪ್ರತಿ ಸೆಕ್ಷನ್ ಅಡಿಯಲ್ಲಿ ಅಪರಾಧಿಗಳಿಗೆ ಶಿಕ್ಷೆ ಘೋಷಿಸಲಾಗಿದೆ.
2008 Ahmedabad serial bomb blast case | A special court pronounces death sentence to 38 out of 49 convicts pic.twitter.com/CtcEWGze2z
— ANI (@ANI) February 18, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.