ನವದೆಹಲಿ: ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನ ಸುಗಮವಾಗಿ ಸಾಗುತ್ತಿದೆ. ಸಂಜೆ 6.00 ಗಂಟೆಯವರೆಗೆ ಮತದಾನ ನಡೆಯಲಿದೆ. 16 ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಇದಲ್ಲದೆ, ಪಂಜಾಬ್ನ 117 ಸ್ಥಾನಗಳಿಗೆ ವಿಧಾನಸಭೆ ಚುನಾವಣೆಗೆ ಏಕ-ಹಂತದ ಮತದಾನವೂ ಕೂಡ ಇಂದು ನಡೆಯುತ್ತಿದೆ.
ಮಧ್ಯಾಹ್ನ 01.00 ಗಂಟೆಯವರೆಗೆ ಸರಾಸರಿ ಮತದಾನದ ಪ್ರಮಾಣ ದಾಖಲಾಗಿದೆ. ಈ ಹಂತದಲ್ಲಿ ಪಂಜಾಬ್ನಲ್ಲಿ ಶೇಕಡಾ 34.10ರಷ್ಟು ಮತ್ತು ಉತ್ತರ ಪ್ರದೇಶದಲ್ಲಿ ಶೇ.35.88ರಷ್ಟು ಮತದಾನವಾಗಿದೆ.
ಪಂಜಾಬ್ನಲ್ಲಿ 117 ಸ್ಥಾನಗಳಿಗೆ 93 ಮಹಿಳೆಯರು ಸೇರಿದಂತೆ ಒಟ್ಟು 1,304 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 1,12,98,081 ಪುರುಷರು, 1,00,20,996 ಮಹಿಳೆಯರು ಮತ್ತು 727 ತೃತೀಯಲಿಂಗಿ ಮತದಾರರು ಸೇರಿದಂತೆ ಒಟ್ಟು 2,13,19,804 ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಮತದಾನಕ್ಕಾಗಿ ರಾಜ್ಯಾದ್ಯಂತ 24,740 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಪಂಜಾಬ್ ಚುನಾವಣೆ ಮತ್ತು ಉತ್ತರ ಪ್ರದೇಶದಲ್ಲಿನ ಮೂರನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರಲ್ಲಿ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.