ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗುರುವಾರ ಉಕ್ರೇನ್ನಲ್ಲಿ “ಮಿಲಿಟರಿ ಕಾರ್ಯಾಚರಣೆ” ಘೋಷಿಸಿದ್ದಾರೆ. ಈ ಮೂಲಕ ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭವಾಗಿಯೇ ಬಿಟ್ಟಿದೆ. ಪಾಶ್ಚಿಮಾತ್ಯ ಆಕ್ರೋಶ ಮತ್ತು ಯುದ್ಧವನ್ನು ಪ್ರಾರಂಭಿಸಬೇಡಿ ಎಂಬ ಜಾಗತಿಕ ಮನವಿಯನ್ನು ಧಿಕ್ಕರಿಸಿ ಪುಟಿನ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಪುಟಿನ್ ಅವರು ಟಿವಿ ಮಾಧ್ಯಮದ ಮೂಲಕ ಯುದ್ಧದ ಉದ್ದೇಶಗಳನ್ನು ಘೋಷಿಸಿ ಎಲ್ಲರಲ್ಲೂ ಅಚ್ಚರಿ ಮತ್ತು ಆತಂಕ ಸೃಷ್ಟಿಸಿದ್ದಾರೆ.
“ನಾನು ಮಿಲಿಟರಿ ಕಾರ್ಯಾಚರಣೆಯ ನಿರ್ಧಾರವನ್ನು ಮಾಡಿದ್ದೇನೆ. ಈ ವಿಷಯದಲ್ಲಿ ಮಧ್ಯಪ್ರವೇಶಿಸುವ ಯಾರ ಮೇಲೆಯೂ ಪ್ರತೀಕಾರ ತೆಗೆದುಕೊಳ್ಳುವ ಪ್ರತಿಜ್ಞೆ ಮಾಡುತ್ತೇನೆ” ಎಂದಿದ್ದಾರೆ.
ಅಲ್ಲದೇ ಉಕ್ರೇನ್ ಮಿಲಿಟರಿಗೆ ಶಸ್ತ್ರಾಸ್ತ್ರಗಳನ್ನು ತ್ಯಜಿಸುವಂತೆ ಅವರು ಕರೆ ನೀಡಿದ್ದಾರೆ.
ರಷ್ಯಾ ಸಂಸತ್ತಿನ ಮೇಲ್ಮನೆಯು ಉಕ್ರೇನ್ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸಲು ಮತ್ತು ಎರಡು ದೇಶಗಳ ನಡುವಿನ ಗಡಿಭಾಗದಲ್ಲಿ ಸೇನೆ ಜಮಾವಣೆ ಮಾಡಲು ಪುಟಿನ್ ಅವರಿಗೆ ಸಮ್ಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರು ಉಕ್ರೇನ್ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಘೋಷಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪೂರ್ವ ಉಕ್ರೇನ್ನಲ್ಲಿನ ಬಂಡಾಯ ನಾಯಕರು ಉಕ್ರೇನ್ ವಿರುದ್ಧ ಮಿಲಿಟರಿ ಸಹಾಯಕ್ಕಾಗಿ ರಷ್ಯಾವನ್ನು ಕೇಳಿಕೊಂಡಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.