ಕುಪ್ವಾರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಲಾಂಗೇಟ್ ಪ್ರದೇಶದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಹೊಸದಾಗಿ ನೇಮಕಗೊಂಡ ಭಯೋತ್ಪಾದಕನನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡಿರುವ ಭಯೋತ್ಪಾದಕನನ್ನು ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತನನ್ನು ಆಜಾದ್ ಗುಂಜ್ ಬಾರಾಮುಲ್ಲಾ ನಿವಾಸಿ ಅಬ್ರಾರ್ ಹಸನ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬಂಧಿತ ಭಯೋತ್ಪಾದಕ ಟಿಆರ್ಎಫ್ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ.
ಅಬ್ರಾರ್ ಈ ಹಿಂದೆ ಕಲ್ಲು ತೂರಾಟಗಾರನಾಗಿದ್ದ ಮತ್ತು ಆತನ ವಿರುದ್ಧ ಎರಡು ಎಫ್ಐಆರ್ಗಳಿವೆ. ನಂತರ, ಆತ ಭಯೋತ್ಪಾದಕ ಸಹಚರರಾಗಿ ಕೆಲಸ ಮಾಡಲು ಪ್ರಾರಂಭಿಸಿದ ಎಂದು ಅಧಿಕಾರಿ ಹೇಳಿದ್ದಾರೆ.
ಈ ಪ್ರದೇಶದಲ್ಲಿ ಅನುಮಾನಾಸ್ಪದ ಚಲನವಲನವನ್ನು ನೋಡಿದ ಭದ್ರತಾ ಪಡೆಗಳು ಕಾರ್ಯಾಚರಣೆಗೆ ಇಳಿದ ವೇಳೆ ಗುಂಡಿನ ಚಕಮಕಿಯಲ್ಲಿ ಈ ಭಯೋತ್ಪಾದಕ ಗಾಯಗೊಂಡಿದ್ದಾನೆ ಮತ್ತು ಇನ್ನೊಬ್ಬನು ಅದೇ ಪ್ರದೇಶದಲ್ಲಿ ಅಡಗಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗಾಯಾಳುವಿನ ಜೊತೆಗಿದ್ದ ಮತ್ತೊಬ್ಬ ಭಯೋತ್ಪಾದಕನ ಪತ್ತೆಗೆ ಶೋಧ ಕಾರ್ಯ ಆರಂಭಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.