ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಫ್ಘಾನಿಸ್ಥಾನ, ಬಾಂಗ್ಲಾದೇಶ, ಭೂತಾನ್, ನೇಪಾಳ, ಮಾಲ್ಡೀವ್ಸ್, ಮ್ಯಾನ್ಮಾರ್, ಪಾಕಿಸ್ಥಾನ ಮತ್ತು ಶ್ರೀಲಂಕಾ ಜೊತೆಗಿನ ಸಂಬಂಧಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಧ್ಯೇಯದಂತೆ ಭಾರತವು ‘ನೆರೆಹೊರೆ ಮೊದಲು’ ಎಂಬ ತತ್ವವನ್ನು ಅಳವಡಿಸಿಕೊಂಡಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷ್ ವಿ ಶೃಂಗ್ಲಾ ಹೇಳಿದ್ದಾರೆ.
ಅಲ್ಲದೇ ಪಾಕಿಸ್ಥಾನವನ್ನು ಹೊರತುಪಡಿಸಿ ಉಳಿದ ಎಲ್ಲಾ ನೆರೆಯ ದೇಶಗಳೊಂದಿಗೆ ನಾವು ಹೆಚ್ಚು ನಿಕಟವಾಗಿ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.
ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ನಲ್ಲಿ ನಡೆದ ಭಾರತದ ನೆರೆಹೊರೆ ಕುರಿತ ಕಾರ್ಯಕ್ರಮದಲ್ಲಿ ವಿದೇಶಾಂಗ ಕಾರ್ಯದರ್ಶಿ ಮಾತನಾಡಿದರು.
“ನಮ್ಮ ನೆರೆಹೊರೆಯಲ್ಲಿರುವ ದೇಶಗಳು ನಮಗೆ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿವೆ. ಈ ದೇಶಗಳೊಂದಿಗಿನ ನಮ್ಮ ಸಂಬಂಧಗಳು ಹಂಚಿಕೆಯ ಇತಿಹಾಸ ಮತ್ತು ಸಂಸ್ಕೃತಿಯಿಂದ ಆಧಾರವಾಗಿವೆ” ಎಂದು ಅವರು ಹೇಳಿದರು.
ಭಾರತ ಮತ್ತು ಅದರ ನೆರೆಹೊರೆಯವರು ಕೈಗೊಂಡ ನೀತಿ ಉಪಕ್ರಮಗಳು ಪರಸ್ಪರ ಪರಿಣಾಮಗಳನ್ನು ಹೊಂದಿವೆ ಎಂದಿದ್ದಾರೆ.
“ನೆರೆಯ ರಾಷ್ಟ್ರಗಳೊಂದಿಗಿನ ಬಾಂಧವ್ಯವು ಗಡಿಯಲ್ಲಿರುವ ನಮ್ಮ ರಾಜ್ಯಗಳಿಗೆ ಹೆಚ್ಚು ಪ್ರಸ್ತುತತೆ ಹೊಂದಿದೆ. ಭಾರತವು ತನ್ನ ಸಮೃದ್ಧಿ ಮತ್ತು ಬೆಳವಣಿಗೆಯನ್ನು ತನ್ನ ನೆರೆಹೊರೆಯವರೊಂದಿಗೆ ಬೆಸೆಯುತ್ತದೆ ಎಂದು ಅರಿತುಕೊಂಡಿದೆ. ನಮ್ಮ ನೆರೆಹೊರೆಯವರು ಅಭಿವೃದ್ಧಿ ಹೊಂದದ ಹೊರತು ನಾವು ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.