ಬೆಂಗಳೂರು: ʼಕಾಶ್ಮೀರ್ ಫೈಲ್ಸ್ʼ ಸಿನಿಮಾಗೆ ಕರ್ನಾಟಕ, ಗುಜರಾತಿನಲ್ಲಿ ತೆರಿಗೆ ವಿನಾಯಿತಿ ಘೋಷಣೆ ಮಾಡಲಾಗಿದೆ.
ನಿನ್ನೆ ಸಿನಿಮಾವನ್ನು ವೀಕ್ಷಣೆ ಮಾಡಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಿನಿಮಾಗೆ ಕರ್ನಾಟಕದಲ್ಲಿ 100% ತೆರಿಗೆ ವಿನಾಯಿತಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಟ್ವಿಟ್ ಮಾಡಿರುವ ಸಿಎಂ,” ದಿ ಕಾಶ್ಮೀರ್ ಫೈಲ್ಸ್ʼಗಾಗಿ ವಿವೇಕಾಗ್ನಿಹೋತ್ರಿ ಅವರಿಗೆ ಅಭಿನಂದನೆಗಳು.
ಕಾಶ್ಮೀರಿ ಪಂಡಿತರು ತಮ್ಮ ತಾಯ್ನಾಡಿನಿಂದ ನಿರ್ಗಮಿಸಿದ ರಕ್ತಸಿಕ್ತ, ಕಟುವಾದ ಮತ್ತು ಪ್ರಾಮಾಣಿಕ ನಿರೂಪಣೆ ಸಿನಿಮಾದಲ್ಲಿದೆ. ಚಲನಚಿತ್ರಕ್ಕೆ ನಮ್ಮ ಬೆಂಬಲವನ್ನು ನೀಡಲು ಮತ್ತು ಅದನ್ನು ವೀಕ್ಷಿಸಲು ನಮ್ಮ ಜನರನ್ನು ಪ್ರೋತ್ಸಾಹಿಸಲು ನಾವು ಕರ್ನಾಟಕದಲ್ಲಿ ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸುತ್ತೇವೆ” ಎಂದಿದ್ದಾರೆ.
ಗುಜರಾತ್ ಕೂಡ ಸಿನಿಮಾವನ್ನು ತೆರಿಗೆ ಮುಕ್ತಗೊಳಿಸಿದೆ. ಹರಿಯಾಣದಲ್ಲೂ ಸಿನಿಮಾ ತೆರಿಗೆ ಮುಕ್ತಗೊಂಡಿದೆ.
ವಿವೇಕ್ ಅಗ್ನಿಹೋತ್ರಿ ಬರೆದು ನಿರ್ದೇಶಿಸಿದ ಮತ್ತು ಝೀ ಸ್ಟುಡಿಯೋಸ್ ನಿರ್ಮಿಸಿದ ಈ ಚಲನಚಿತ್ರವು ಪಾಕಿಸ್ಥಾನ ಬೆಂಬಲಿತ ಭಯೋತ್ಪಾದಕರು ಕಾಶ್ಮೀರಿ ಪಂಡಿತ ಸಮುದಾಯದ ಜನರನ್ನು ವ್ಯವಸ್ಥಿತವಾಗಿ ಹತ್ಯೆಗೈದ ನಂತರ ಕಾಶ್ಮೀರದಿಂದ ಹಿಂದೂಗಳ ಪಲಾಯಣದ ಕಥಾಹಂದರವನ್ನು ಹೊಂದಿದೆ.
ಇದರಲ್ಲಿ ಅನುಪಮ್ ಖೇರ್, ದರ್ಶನ್ ಕುಮಾರ್, ಮಿಥುನ್ ಚಕ್ರವರ್ತಿ ಮತ್ತು ಪಲ್ಲವಿ ಜೋಶಿ ಮುಂತಾದವರು ನಟಿಸಿದ್ದಾರೆ.
Kudos to @vivekagnihotri for #TheKashmirFiles, a blood-curdling, poignant & honest narrative of the exodus of Kashmiri Pandits from their home land.
To lend our support to the movie & encourage our people to watch it, we will make the movie tax-free in Karnataka.
— Basavaraj S Bommai (@BSBommai) March 13, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.