ನವದೆಹಲಿ: ಕುಟುಂಬ ರಾಜಕಾರಣಕ್ಕೆ ಬಿಜೆಪಿ ವಿರುದ್ಧವಾಗಿದೆ ಎಂದು ಒತ್ತಿ ಹೇಳಿದ ಪ್ರಧಾನಿ ನರೇಂದ್ರ ಮೋದಿ, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹಲವಾರು ಸಂಸದರ ಮಕ್ಕಳಿಗೆ ಟಿಕೆಟ್ ಸಿಗದಿರಲು ಇದೇ ಕಾರಣ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಪಕ್ಷದ ಚುನಾವಣಾ ಗೆಲುವಿಗಾಗಿ ಪಿಎಂ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಇಬ್ಬರನ್ನೂ ಅಭಿನಂದಿಸಲಾಯಿತು.
ಇತ್ತೀಚೆಗಷ್ಟೇ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ನಿರ್ಣಾಯಕವಾಗಿರುವ ಉತ್ತರ ಪ್ರದೇಶ ಸೇರಿದಂತೆ ನಾಲ್ಕರಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಂಡಿದೆ.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಂಶಾಡಳಿತ ರಾಜಕಾರಣ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾದ ಕಾರಣ ಅದರ ವಿರುದ್ಧ ಹೋರಾಡುವಂತೆ ಪಕ್ಷದ ಸಂಸದರಿಗೆ ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.
ವಂಶ ರಾಜಕಾರಣದ ವಿರುದ್ಧ ಹೋರಾಡಲು, ಬಿಜೆಪಿಯು ಸಂಘಟನೆಯೊಳಗೆ ಅಪ್ಪ ಮಕ್ಕಳಿಗೆ ಟಿಕೆಟ್ ನೀಡುವ ಆಚರಣೆಗಳಿಗೆ ಕಡಿವಾಣ ಹಾಕಬೇಕು ಎಂದು ಪ್ರಧಾನಿ ಮೋದಿ ಹೇಳಿದರು, ಕೆಲವು ಪಕ್ಷದ ಸಂಸದರ ಮಕ್ಕಳಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದರೆ ಇದುವೇ ಕಾರಣ ಎಂದರು ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ಬಿಡುಗಡೆಯಾದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನೂ ಪ್ರಧಾನಿ ಮೋದಿ ಶ್ಲಾಘಿಸಿದರು ಮತ್ತು ಅಂತಹ ಚಲನಚಿತ್ರಗಳನ್ನು ಹೆಚ್ಚಾಗಿ ನಿರ್ಮಾಣ ಮಾಡಬೇಕು ಎಂದು ಸಲಹೆ ನೀಡಿದರು ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಉಪಸ್ಥಿತರಿದ್ದ ಬಿಜೆಪಿ ಸಂಸದ ಮನೋಜ್ ತಿವಾರಿ ಪ್ರಕಾರ, ಬಿಜೆಪಿಯು ತುಲನಾತ್ಮಕವಾಗಿ ಕಡಿಮೆ ಮತಗಳನ್ನು ಪಡೆದಿರುವ ಆಯಾ ಕ್ಷೇತ್ರಗಳಲ್ಲಿ ಅಂತಹ 100 ಬೂತ್ಗಳನ್ನು ಗುರುತಿಸಲು ಮತ್ತು ಅದರ ಹಿಂದಿನ ಕಾರಣಗಳನ್ನು ಗುರುತಿಸುವಂತೆ ಪ್ರಧಾನಿ ಮೋದಿ ಸಂಸದರಿಗೆ ಕರೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.