ನವದೆಹಲಿ: ದೇಶದ 77 ಕೋಟಿ ಜನರು ‘ಒಂದು ರಾಷ್ಟ್ರ ಒಂದು ಪಡಿತರ ಚೀಟಿ’ ಯೋಜನೆಗೆ ಒಳಪಟ್ಟಿದ್ದಾರೆ, ಈ ಮೂಲಕ ಫಲಾನುಭವಿಗಳು ತಮ್ಮ ಪಾಲಿನ ಆಹಾರ ಧಾನ್ಯಗಳನ್ನು ದೇಶದ ಎಲ್ಲಿಂದಲಾದರೂ ತೆಗೆದುಕೊಳ್ಳಬಹುದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಡಾ. ಪಿಯೂಷ್ ಗೋಯಲ್ ಬುಧವಾರ ಹೇಳಿದ್ದಾರೆ.
ಸರ್ಕಾರದ ಸವಲತ್ತುಗಳನ್ನು ಪಡೆಯುವಲ್ಲಿ ವಲಸೆ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಣನೆಗೆ ತೆಗೆದುಕೊಂಡು ತಂತ್ರಜ್ಞಾನ ಚಾಲಿತ ಉಪಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಪರಿಕಲ್ಪನೆ ಮಾಡಿದ್ದು, ರಾಷ್ಟ್ರವ್ಯಾಪಿ ಅನುಷ್ಠಾನಗೊಂಡಿದೆ ಎಂದು ಗೋಯಲ್ ಲೋಕಸಭೆಯಲ್ಲಿ ಹೇಳಿದ್ದಾರೆ.
ಈ ಯೋಜನೆಯು ಈಗ 35 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 77 ಕೋಟಿ ಫಲಾನುಭವಿಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.
ಈ ಯೋಜನೆಯು ವಲಸೆ ಫಲಾನುಭವಿಗಳು ತಮ್ಮ ಅಸ್ತಿತ್ವದಲ್ಲಿರುವ ಪಡಿತರ ಚೀಟಿಯನ್ನು ಗುರುತಿನ ಬಯೋಮೆಟ್ರಿಕ್ ದೃಢೀಕರಣದೊಂದಿಗೆ ಬಳಸಿಕೊಂಡು ಆಯ್ಕೆಯ ನ್ಯಾಯಬೆಲೆ ಅಂಗಡಿಯಿಂದ ತಮ್ಮ ಆಹಾರ ಧಾನ್ಯಗಳನ್ನು ಪಡೆಯಲು ಅನುವು ಮಾಡಿಕೊಡುತ್ತದೆ ಎಂದು ಅವರು ಹೇಳಿದ್ದಾರೆ.
ಯಾವುದೇ ತಾರತಮ್ಯವಿಲ್ಲದೆ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದ್ದು, ಇದುವರೆಗೆ ಏಳು ಕೋಟಿ ಜನರು ಪೋರ್ಟಬಿಲಿಟಿಯ ಲಾಭವನ್ನು ಪಡೆದುಕೊಂಡಿದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.