ನವದೆಹಲಿ: ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಮತ್ತೊಂದು ಅವಧಿಗೆ ಅವರು ಮಣಿಪುರದ ಮುಖ್ಯಮಂತ್ರಿಯಾಗಿ ನೇಮಕವಾಗಿದ್ದಾರೆ.
ಬಿಜೆಪಿಯ ಕೇಂದ್ರ ವೀಕ್ಷಕರು ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ರಾಜ್ಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಶಾಸಕರೊಂದಿಗೆ ಸಭೆಯನ್ನು ನಡೆಸಿದ ನಂತರ ಈ ಘೋಷಣೆ ಮಾಡಿದ್ದಾರೆ.
ಸೀತಾರಾಮನ್ ನಿನ್ನೆ ಬೆಳಿಗ್ಗೆ ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್ ಮತ್ತು ಕಿರಣ್ ರಿಜಿಜು ಅವರೊಂದಿಗೆ ಇಂಫಾಲ್ಗೆ ಆಗಮಿಸಿದ್ದರು ಮತ್ತು ಬಿಜೆಪಿ ಮುಖ್ಯಮಂತ್ರಿಯನ್ನು ಅಂತಿಮಗೊಳಿಸಿದರು.
ಮಣಿಪುರದಲ್ಲಿ ಬಿಜೆಪಿ 60 ಸದಸ್ಯ ಬಲದ ವಿಧಾನಸಭೆಯಲ್ಲಿ 32 ಸ್ಥಾನಗಳನ್ನು ಗೆದ್ದು ಅಧಿಕಾರವನ್ನು ಉಳಿಸಿಕೊಂಡಿದೆ. ಎನ್ ಬಿರೇನ್ ಸಿಂಗ್ ಅವರು ಹೀಂಗಾಂಗ್ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದು ಬಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.