ಲಕ್ನೋ: ಯುಪಿ ಮದರಸ ಶಿಕ್ಷಣ ಮಂಡಳಿಯು ಮದರಸಾಗಳಲ್ಲಿ ವಿದ್ಯಾರ್ಥಿಗಳು ತಮ್ಮ ತರಗತಿಯನ್ನು ಪ್ರಾರಂಭಿಸುವ ಮೊದಲು ರಾಷ್ಟ್ರಗೀತೆಯನ್ನು ಹಾಡುವುದನ್ನು ಕಡ್ಡಾಯಗೊಳಿಸಿದೆ. ಬೆಳಗಿನ ಪ್ರಾರ್ಥನೆಯೊಂದಿಗೆ ರಾಷ್ಟ್ರಗೀತೆಯನ್ನು ಹಾಡಬೇಕು ಎಂದು ಮಂಡಳಿಯು ಗುರುವಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.
2017 ರಲ್ಲಿ ಉತ್ತರ ಪ್ರದೇಶದ ಮದರಸಗಳಲ್ಲಿ ಸ್ವಾತಂತ್ರ್ಯ ದಿನದಂದು ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜಾರೋಹಣವನ್ನು ಕಡ್ಡಾಯಗೊಳಿಸಲಾಯಿತು.
ಇದಲ್ಲದೇ ಶಿಕ್ಷಕರ ಹಾಜರಾತಿಯನ್ನು ಟ್ರ್ಯಾಕ್ ಮಾಡಲು ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಲು ಮದರಸಾ ಮಂಡಳಿಯು ನಿರ್ಧರಿಸಿದೆ. ವಿದ್ಯಾರ್ಥಿಗಳ ನೋಂದಣಿಯನ್ನು ಈಗ ಆನ್ಲೈನ್ನಲ್ಲಿ ಮಾಡಲಾಗುತ್ತದೆ.
2018 ರಲ್ಲಿ, ಮಹಾರಾಜ್ಗಂಜ್ ಜಿಲ್ಲೆಯ ಮದರಸವೊಂದರಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡುವುದನ್ನು ಅಲ್ಲಿನ ಧರ್ಮಗುರುಗಳು ಅರ್ಧದಲ್ಲಿ ನಿಲ್ಲಿಸಿದ ಘಟನೆ ನಡೆದಿತ್ತು. ಇದರ ನಂತರ ಯೋಗಿ ಸರ್ಕಾರವು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸಿ ಆದೇಶವನ್ನು ನೀಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.